ಸಂವಿಧಾನ ಪೀಠಿಕೆ ಪ್ರತಿಷ್ಠಾಪನೆಗಾಗಿ ಗುದ್ದಲಿ ಪೂಜೆ
ಶಿವಮೊಗ್ಗ ನವೆಂಬರ್ 25 ನ. ೨೬ ರಂದು ’ಸಂವಿಧಾನ ದಿನಾಚರಣೆ’ ಪ್ರಯುಕ್ತ ಭಾರತ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆ ವ್ಯಾಪ್ತಿಯ ಅಲ್ಲಮ ಪ್ರಭು ಸ್ವಾತಂತ್ರ ಉದ್ಯಾನದಲ್ಲಿ ೧೦ಘಿ೬ ಅಡಿ ಅಳತೆಯ ಕನ್ನಡ ಮತ್ತು ಆಂಗ್ಲ ಭಾ? ಮುದ್ರಿತ ಸಂವಿಧಾನ ಪೀಠಿಕೆಯನ್ನು ಪ್ರತಿ?ಪಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಬೆಳಗ್ಗೆ ೧೦:೦೦ ಗಂಟೆಗೆ ಗುದ್ದಲಿ ಪೂಜೆ ನೆರವೇರಿಸಲಿರುವರು.

ಬೆಳಗ್ಗೆ ೧೧:೦೦ ಗಂಟೆಗೆ ಡಾ: ಬಿ. ಆರ್. ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು,ದೀಕಾರ್ಯಕ್ರಮದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು ಪಾಲ್ಗೊಳ್ಳಲಿರುವರು. ಇದೇ ಕಾರ್ಯಕ್ರಮದಲ್ಲಿ ಉಪನ್ಯಾಸಕರು ಸಂವಿಧಾನದ ಬಗ್ಗೆ ಉಪನ್ಯಾಸ ನೀಡಲಿದ್ದು, ಜಿಲ್ಲೆಯ ನಾಗರೀಕರೆಲ್ಲರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

ಅನಾಮದೇಯ ಮೃತ ವ್ಯಕ್ತಿಯ ವಾರಸ್ಸುದಾರರ ಪತ್ತೆಗೆ ಮನವಿ
ಶಿವಮೊಗ್ಗ ನವೆಂಬರ್ ೨೫; ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರಿ ಬಸ್ ನಿಲ್ದಾಣದ ಸಂತೆ ಮೈದಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುಮಾರು ೩೫-೪೦ ವರ್ಷ ವಯಸ್ಸಿನ ವ್ಯಕ್ತಿಯನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಈತ ವಿಷ ಸೇವಿಸಿದ್ದು ತಿಳಿದು ಬಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ ನ.೧೯ ರಂದು ಮೃತಪಟ್ಟಿರುತ್ತಾನೆ.

ಮೃತ ವ್ಯಕ್ತಿಯ ಚಹರೆ ೫.೬ ಅಡಿ ಎತ್ತರ, ದುಂಡುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಮೃತನ ಎಡಕೆನ್ನೆಯ ಮೇಲೆ ಜೋಳದ ಗಾತ್ರದ ಕಪ್ಪು ಮಚ್ಚೆ ಇರುತ್ತದೆ. ಈ ಮೃತ ವ್ಯಕ್ತಿಯ ವಾರಸ್ಸುದಾರರು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.:೦೮೧೮೨-೨೬೧೪೧೪ / ೯೯೧೬೬೮೮೨೫೪೪ ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ಸಂವಿಧಾನ ದಿನ
ಶಿವಮೊಗ್ಗ ನವೆಂಬರ್ ೨೫; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ನ.೨೬ ರಂದು ಬೆಳಗ್ಗೆ ೧೧.೦೦ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಭನದಲ್ಲಿ ಸಂವಿಧಾನ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪ ನೆರೆವೇರಿಸಲ್ಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆ ಇಲಾಖೆ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಭದ್ರಾವತಿ ಶಾಸಕ ಹಾಗೂ ಕ.ಗ್ರಾ.ಮೂ.ಸೌ.ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ ಮತ್ತು ಸಾಗರ ಶಾಸಕ ಹಾಗೂ ಕ.ಅ.ಕೈ.ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಇವರುಗಳು ಆಗಮಿಸಲಿದ್ದಾರೆ. ಶಿವಮೊಗ್ಗ ನಗರ ಶಾಸಕ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಸಂಸದರು, ವಿಧಾನ ಸಭಾ/ವಿಧಾನ ಪರಿಷತ್ ಶಾಸಕರು, ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರುಗಳು, ಜನ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಣಾ ಅಧಿಕಾರಿಗಳು, ವಿವಿದ ಸಂಘ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲ್ಲಿದ್ದಾರೆ.
ಕಾರ್ಯಕ್ರಮದಲ್ಲಿ ಕಸ್ತೂರಬಾ ಬಾಲಿಕ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಸ್.ಹೆಚ್. ರವಿಕುಮಾರ್‌ರವರು ಸಂವಿಧಾನದ ಅರಿವು ಮತ್ತು ಜಾಗೃತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಕೆ.ಎನ್.ರವರು ಸಂವಿಧಾನದ ಆಶಯಗಳು ಮತ್ತು ಮೂಲಭೂತ ಹಕ್ಕುಗಳ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಬೆಳಗ್ಗೆ ೧೦.೦೦ಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಅಲ್ಲಮ ಪ್ರಭು ಸ್ವಾತಂತ್ರ ಉದ್ಯಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರಿಂದ ೧೦*೬ ಅಡಿ ಅಳತೆಯ ಸಂವಿಧಾನ ಪೀಠಿಕೆ ಪ್ರತಿಷ್ಠಾಪನೆಗೆ ಶಂಕು ಸ್ಥಾಪನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನವೆಂಬರ್ ೨೫; ಶಿವಮೊಗ್ಗ ನಗರದ ಎಲೆರೇವಣ್ಣ ಕೇರಿ ರಸ್ತೆಯಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಇರುವುದರಿಂದ ನ. ೨೭ ರಂದು ಬೆಳಗ್ಗೆ ೯.೦೦ ರಿಂದ ಸಂಜೆ ೬.೦೦ರವರೆಗೆ ಗಾಂಧಿಬಜಾರ್, ಎಲೆರೇವಣ್ಣ ಕೇರಿ, ನಾಗಪ್ಪಕೇರಿ, ಅಶೋಕರಸ್ತೆ, ತುಳುಜಾ ಭವಾನಿ ರಸ್ತೆ, ಅನವೇರಪ್ಪ ಕೇರಿ, ಹಾವಿನಕೇರಿ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್ ವ್ಯತ್ಯಯ: ಸಹಕರಿಸಲು ಮನವಿ

ಶಿವಮೊಗ್ಗ, ೨೫: : ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.೨೭ ರಂದು ಬೆಳಗ್ಗೆ ೯.೦೦ ರಿಂದ ಸಂಜೆ ೫.೦೦ರವರೆಗೆ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ನಗರ ಪ್ರದೇಶಗಳಾದ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್‌ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್‌ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಜೋಸೆಫ್ ನಗರ, ಟ್ಯಾಂಕ್‌ಬೌಂಡ್‌ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠರಸ್ತೆ,ಹಳೆ ಹೊನ್ನಾಳಿ ರಸ್ತೆ, ಬಾಲ್‌ರಾಜ್ ಅರಸ್‌ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್‌ರಸ್ತೆ, ಟ್ಯಾಂಕ್‌ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

error: Content is protected !!