ಶಿವಮೊಗ್ಗ ನ.27
 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ಜಿಲ್ಲೆಯ 07 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 126 ಅಂಗನವಾಡಿ ಕಾರ್ಯಕರ್ತೆಯರು ಮತ್ತು 448 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬAಧಿಸಿದ ಅಂಗನವಾಡಿ, ಗ್ರಾಮ ಪಂಚಾಯತ್, ಮಹಾನಗರಪಾಲಿಕೆ, ನಗರ ಪಾಲಿಕೆ ಮತ್ತು ಪಟ್ಟಣ ಪಂಚಾಯ್ತಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
 ಈ ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣಾ ಅರ್ಜಿಗಳನ್ನು ದಿ: 04-12-2024 ರೊಳಗಾಗಿ ಸಂಬAಧಿಸಿದ ಶಿಶು ಅಭಿವೃದ್ದಿ ಯೋಜನಾ ಕಚೇರಿಗೆ ಸಲ್ಲಿಸಬಹುದು.


 ಭದ್ರಾವತಿ ತಾಲ್ಲೂಕು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಾರ್ಯಕರ್ತೆಯರು 10, ಸಹಾಯಕಿಯರು 72, ಹೊಸನಗರ ಕಾರ್ಯಕರ್ತೆಯರು 07, ಸಹಾಯಕಿಯರು 35, ಸಾಗರ ಕಾರ್ಯಕರ್ತೆಯರು 21, ಸಹಾಯಕಿಯರು 62, ಶಿಕಾರಿಪುರ ಕಾರ್ಯಕರ್ತೆಯರು 08, ಸಹಾಯಕಿಯರು 55, ಶಿವಮೊಗ್ಗ ಕಾರ್ಯಕರ್ತೆಯರು 33, ಸಹಾಯಕಿಯರು 118, ಸೊರಬ ಕಾರ್ಯಕರ್ತೆಯರು 38, ಸಹಾಯಕಿಯರು 65 ಮತ್ತು ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಾರ್ಯಕರ್ತೆಯರು 09 ಹಾಗೂ ಸಹಾಯಕಿರಯರು 41 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

=

ಡಿ.05 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ : ಯುವ ಕೃತಿ ಮತ್ತು ವಿಜ್ಞಾನ ಮೇಳ
ಶಿವಮೊಗ್ಗ: ನವೆಂಬರ್ 27:

ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸಹ್ಯಾದ್ರಿ ವಿಜ್ಞಾನ ಕಾಲೇಜು ಇವರುಗಳ ಸಹಯೋಗ ದೊಂದಿಗೆ ಸಹ್ಯಾದ್ರಿ ವಿಜ್ಞಾನ ಕಾಲೇಜು ಜ್ಯೂಬಿಲಿ ಸಭಾಂಗಣದಲ್ಲಿ ಡಿ. 05 ರಂದು ಜಿಲ್ಲಾ ಮಟ್ಟದ ಯುವಜನೋತ್ಸವದ ಕಾರ್ಯಕ್ರಮದಡಿಯಲ್ಲಿ ಯುವ ಕೃತಿ ಮತ್ತು ವಿಜ್ಞಾನ ಮೇಳವನ್ನು ಏರ್ಪಡಿಸಲಾಗಿದೆ.
 ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಭಾಗವಹಿಸುವ ಯುವಕ, ಯುವತಿಯರು 15 ರಿಂದ 29 ವರ್ಷ ವಯೋಮಿತಿಗೆ ಒಳಪಟ್ಟಿರಬೇಕು.
ವಿಜ್ಞಾನ ಮೇಳ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಆಧುನಿಕತೆ ಎಂಬ ಪರಿಕಲ್ಪನೆ ಹೊಂದಿದ್ದು,


ತAಡದ ಬಹುಮಾನ ಪ್ರಥಮ-7000/-, ದ್ವಿತೀಯ – 5000/- ಮತ್ತು ತೃತೀಯ-3000/- ನಗದು ಬಹುಮಾನ ನೀಡಲಾಗುವುದು.
 ವೈಯಕ್ತಿಕ ಬಹುಮಾನ 3000/-, ದ್ವಿತೀಯ- 2000/- ಮತ್ತು ತೃತೀಯ-1500/- ನಗದು ಬಹುಮಾನ ನೀಡಲಾಗುವುದು.
 ತಂಡದಲ್ಲಿ ಗರಿಷ್ಟ 5 ಜನ ಮತ್ತು ವೈಯಕ್ತಿಕ ಒಬ್ಬರು ಮಾತ್ರ ಭಾಗವಹಿಸಬಹುದು. ಆಧುನಿಕತೆಗೆ ಪ್ರಾಧಾನ್ಯತೆ ನೀಡಲಾಗುವುದು. ಸಕ್ರಿಯ ಮಾದರಿ ತಯಾರಿಕೆಯ ಪ್ರದರ್ಶನವಿರಬೇಕು. ನಿಷ್ಕಿçಯ ಮಾದರಿ ತಯಾರಿಕೆಗೆ ಅವಕಾಶವಿಲ್ಲ. ಭಾಗವಹಿಸುವ ಸ್ಪರ್ಧಾಳುಗಳು ಅವಶ್ಯವಿರುವ ಅಗತ್ಯ ಸಾಮಗ್ರಿಗಳನ್ನು ತಾವೇ ತರಬೇಕು.


ಯುವ ಕೃತಿ ವಿಭಾಗದಲ್ಲಿ ಗುಡಿಕೈಗಾರಿಕೆ ಕಲಾ ಪ್ರಕಾರ, ನೇಕಾರಿಕೆ/ಜವಳಿ, ಕೃಷಿ ಉತ್ಪನ್ನಗಳನ್ನು ತಯಾರಿಸಬೇಕು. ಪ್ರತಿಯೊಂದರಲ್ಲೂ 7 ಜನ ಭಾಗವಹಿಸಬಹುದು. ಸ್ಪರ್ಧಾಳುಗಳು ಅಗತ್ಯ ಸಾಮಗ್ರಿಗಳನ್ನು ತಾವೇ ತರಬೇಕು. ಭಾಗವಹಿಸುವವರಿಗೆ ಗೌರವ ಧನ ನೀಡಲಾಗುವುದು.
ಆಸಕ್ತರು ಸ್ಪರ್ಧೆಯಲ್ಲಿ ಭಾಗವಹಿಸುವ ಬಗ್ಗೆ ಮಾಹಿತಿಯನ್ನು ಡಿ.03 ರೊಳಗಾಗಿ ನೀಡಬೇಕು ಮತ್ತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅಥವಾ ಯುವ ಕೇಂದ್ರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08182 220883 9961332968, 9900280416 ಸಂಪರ್ಕಿಸುವುದು. ಮತ್ತು MYBHARAT (my bharat.gov.in)  ಪೋರ್ಟಲ್‌ನಲ್ಲಿ ್ಲ ರಿಜಿಸ್ಟೆçಷನ್ ಮಾಡಿಕೊಳ್ಳತಕ್ಕದ್ದು ಎಂದು ಯುವ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!