ಶಿವಮೊಗ್ಗ: ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ತಸ್ತರಿಗೆ ಶೀಘ್ರವೇ ನಿವೇಶನ ಹಂಚಿಕೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ನೇತೃತ್ವದಲ್ಲಿ ಸಂತ್ರಸ್ತರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಸಂತ್ರಸ್ತರಿಗೆ ನಿವೇಶನ ನೀಡುವುದಾಗಿ ಭರವಸೆ ನೀಡಿರುವುದು ಸರಿಯಷ್ಟೇ. ಆದರೆ, 13 ವರ್ಷಗಳೇ ಕಳೆದರೂ ಸಂತ್ರಸ್ತರಿಗೆ ನಿವೇಶನ ಹಂಚಿಕೆ ಮಾಡಿಲ್ಲ. ಹಾಗಾಗಿ ಶೀಘ್ರವೇ ನಿವೇಶನ ಹಂಚಿಕೆ ಮಾಡಬೇಕು ಎಂದು ಸಂತ್ರಸ್ತರು ಒತ್ತಾಯಿಸಿದರು.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಈ ಬಗ್ಗೆ ಪರಿಶೀಲಿಸಿ ನ್ಯಾಯ ಒದಗಿಸಿಕೊಡುವ ಭರವಸೆ ನೀಡಿದರು.
ಈ ವೇಳೆ ಪಿಎಲ್ಡಿ ಬ್ಯಾಂಕ್ನ ಉಪಾಧ್ಯಕ್ಷರಾದ ಆರ್.ವಿಜಯಕುಮಾರ್, ಸೋಗಾನೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅನಿಲ್, ಸದಸ್ಯರಾದ ಹೇಮೇಶ್ ನಾಯ್ಕ್, ಸುಮಿತ್ರಮ್ಮ, ಮುಖಂಡರಾದ ಅರುಣ್ ನಾಯ್ಡು, ಹೇಮಂತ್, ನಾಗರಾಜ್ ಮತ್ತಿತರರು ಇದ್ದರು.