ಬೆಂಗಳೂರು,ಫೆ.22:
ಜನ ಮಾಸ್ಕ್ ಹಾಕುವುದನ್ನೇ ಬಿಟ್ಟಿದ್ದಾರೆ. ವಿಐಪಿ, ವಿವಿಐಪಿಗಳೂ ಸಹ ಹಾಕ್ತಿಲ್ಲ. ಇದು ನಿಜಕ್ಕೂ ಅಪಾಯಕಾರಿ. ಹೀಗಾಗಿ ಮಾಸ್ಕ್ ಹಾಕದೇ ಸಭೆ, ಸಮಾರಂಭಗಳಲ್ಲಿ ಕಾಣಿಸಿಕೊಂಡ್ರೆ ಕೊರೊನಾ ಟೆಸ್ಟ್ ಮಾಡೋದು ಗ್ಯಾರಂಟಿ.


ರಾಜ್ಯದಲ್ಲಿ ಸಭೆ, ಸಮಾರಂಭ, ಸಮಾವೇಶದಲ್ಲಿ ಹೆಚ್ಚಿನ ಜನರು ಸೇರುತ್ತಾ ಇದ್ದಾರೆ. ಹೀಗಾಗಿ ಮುಂಜಾಗ್ರತೆ ತೆಗೆದುಕೊಳ್ಳಲೇಬೇಕು. ಮಾರ್ಗಸೂಚಿಗೆ ವಿರುದ್ಧವಾಗಿ ನಡೆಯುತ್ತಿವೆ. ಮದುವೆ ಸಮಾರಂಭಗಳು ಹಾಗೆ ನಡೆಯುತ್ತಿವೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಡಿಸಿ, ಎಸ್ಪಿ, ಸಿಇಒ, ಆರೋಗ್ಯಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದವನ್ನ ಮಾಡಿದ್ದೇವೆ ಎಂದರು.


ಮದುವೆ ಸೇರಿದಂತೆ ಎಲ್ಲಾ ಸಭೆ ಸಮಾರಂಭಕ್ಕೆ ಮಾರ್ಷಲ್ ಹಾಕ್ತೇವೆ. ಇದರ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸ್ತೇವೆ. ಫುಡ್ ಮಾಡುವವರು, ಹಂಚುವವರ ಮೇಲೆ ನಿಗಾ ವಹಿಸಲಾಗುತ್ತದೆ. ಇವರೆಲ್ಲರಿಗೆ ಕೊರೋನಾ ಟೆಸ್ಟ್ ಕಡ್ಡಾಯ ಮಾಡ್ತೇವೆ ಎಂದಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!