ಶಿವಮೊಗ್ಗ: ಸಾರ್ವಜನಿಕರಿಗೆ ತ್ವರಿತ ಸೇವೆ ನೀಡಲು ಕ್ರಮಕೈಗೊಳ್ಳಲಾಗುವುದು ಎಂದು ಮೇಯರ್ ಸುನಿತಾ ಅಣ್ಣಪ್ಪ ತಿಳಿಸಿದ್ದಾರೆ.


ಪಾಲಿಕೆಯಲ್ಲಿ ಸಾರ್ವಜನಿಕರು ಪ್ರತಿನಿತ್ಯ ತಮ್ಮ ಕೆಲಸಗಳಿಗಾಗಿ ಅಲೆದಾಡುತ್ತಿದ್ದಾರೆ. ಆದರೆ ಕೆಲವು ತಾಂತ್ರಿಕ ಕಾರಣಕ್ಕಾಗಿ ಅದು ವಿಳಂಬವಾಗುತ್ತಿದೆ ಎಂದು ಸಾರ್ವಜನಿಕರ ದೂರಿನ ಅನ್ವಯ ಇಂದು ಮೇಯರ್ ಸುನಿತಾ ಅಣ್ಣಪ್ಪ ಹಾಗು ಉಪಮೇಯರ್ ಶಂಕರ್‌ಗನ್ನಿಯವರು ಜನನ, ಮರಣ ಪ್ರಮಾಣ ಪತ್ರ ವಿತರಣಾ ವಿಭಾಗ, ಕಂದಾಯ ವಿಭಾಗ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇನ್ನೊಂದು ಹೆಚ್ಚುವರಿಯಾಗಿ ಏರ್‌ಟೆಲ್ ಸಂಪರ್ಕ ನಿಯೋಜಿಸಿ ಸರ್ವರ್ ಡೌನ್ ಸಮಸ್ಯೆ ಪರಿಹರಿಸಿ ಶೀಘ್ರ ಕಡತ ವಿಲೇವಾರಿಗೆ ಕ್ರಮಕೈಗೊಂಡರು.
ಕೆಲವು ಕಡೆ ಕಂಪ್ಯೂಟರ್ ದೋಷಗಳು ಇದ್ದುದು ಕಂಡುಬಂದಿತು. ತಕ್ಷಣವೇ ಸಮಸ್ಯೆಗಳನ್ನು ನಿವಾರಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಮೇಯರ್ ಹೇಳಿದರು. ಮತ್ತು ತ್ವರಿತ ಸೇವೆ ನೀಡಲು ಆಧ್ಯತೆ ನೀಡುವುದಾಗಿ ಅವರು ತಿಳಿಸಿದರು.

By admin

ನಿಮ್ಮದೊಂದು ಉತ್ತರ

error: Content is protected !!