ಶಿವಮೊಗ್ಗ: ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಹೇಳಿಕೊಳ್ಳಲು, ದೂರುಸಲ್ಲಿಸಲು ಅನುಕೂಲವಾಗುವಂತೆ ಹಳೆ ಜೈಲು ಆವರಣದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ರವರ ಕಚೇರಿಯನ್ನು ತೆರೆಯಲಾಗಿದೆ ಎಂದು ಅಪರ ಜಿಲ್ಲಾ ರಕ್ಷಣಾಧಿಕಾರಿ ಡಾ.ಶೇಖರ್ ಹೇಳಿದರು.


ಅವರು ಇಂದು ಹಳೆ ಜೈಲು ಆವರಣದಲ್ಲಿರುವ ವಸತಿ ಗೃಹದಲ್ಲಿ ನೂತನವಾಗಿ ಆರಂಭಿಸಿರುವ ಸರ್ಕಲ್ ಇನ್ಸ್‌ಪೆಕ್ಟರ್ ರವರ ಕಚೇರಿ ಉದ್ಘಾಟಿಸಿ ಮಾತನಾಡಿದರು.
ವಿನೋಬನಗರ ಹಾಗೂ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಚೇರಿ ಸ್ಥಾಪಿಸಲಾಗಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮತ್ತು ಕುಂದುಕೊರತೆಗಳನ್ನು ಸಮಯಕ್ಕೆ ಸರಿಯಾಗಿ ಹೇಳಿಕೊಳ್ಳಲು ಅನುಕೂಲವಾಗುವಂತೆ ಈ ಕಚೇರಿಯನ್ನು ಸ್ಥಾಪಿಸಲಾಗಿದೆ. ಇದು ಮುಖ್ಯ ಸ್ಥಳದಲ್ಲಿದ್ದು, 2 ಠಾಣೆಗಳ ವ್ಯಾಪ್ತಿಗಳ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಸಾರ್ವಜನಿಕರು ಯಾವುದೇ ಸಮಸ್ಯೆಗಳನ್ನು ಯಾವುದೇ ಸಮಯದಲ್ಲಿ ಬಂದು ಪರಿಹಾರ ಪಡೆಯಬಹುದು ಎಂದರು.


ಈ ಸಂದರ್ಭದಲ್ಲಿ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ, ಸರ್ಕಲ್ ಇನ್ಸ್‌ಪೆಕ್ಟರ್ ರವಿ ಮುಂತಾದವರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!