ಶಿವಮೊಗ್ಗ, ಮೇ.06: ಜಿಲ್ಲೆಯಲ್ಲಿ ಗುರುವಾರ ಕೊರೊನ ಸೋಂಕಿಗೆ ತುತ್ತಾಗಿ 16 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ 444 ಮಂದಿಗೆ ಸೋಂಕು ತಗುಲಿದ್ದು, 309 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 451 ಕ್ಕೆ ಏರಿದೆ. ಗುರುವಾರ ಶಿವಮೊಗ್ಗ ತಾಲೂಕಿನಲ್ಲಿ 130 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 148, ಶಿಕಾರಿಪುರ ೨೫, ತೀರ್ಥಹಳ್ಳಿಯಲ್ಲಿ 88 , ಸೊರಬ 09, ಸಾಗರ 14, ಹೊಸನಗರ 15 ಹಾಗೂ ಇತರೆ ಜಿಲ್ಲೆಗಳ 25 ರೋಗಿಗಳಲ್ಲಿ ಸೋಂಕು ಪತ್ತೆಯಾಗಿದೆ.
07 ಮಂದಿ ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ 4124 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.