ಶಿವಮೊಗ್ಗ, ಮೇ.20
ನಿನ್ನೆ ಮದ್ಯ ರಾತ್ರಿ ಹೆಚ್. ಸಿದ್ದಯ್ಯ ರಸ್ತೆ, ಭರ್ಮಪ್ಪನಗರ ಗಳಲ್ಲಿ ನಿಲ್ಲಿಸಿದ್ದ 12 ಕಾರು, 1 ಅಟೋ ಮತ್ತು 5 ದ್ವಿಚಕ್ರ ವಾಹನಗಳ ವಿನ್ಡೋ ಗ್ಲಾಸ್, ಹಿಂಬದಿಯ ಗ್ಲಾಸ್, ಬೈಕ್ಗಳ ಹೆಡ್ಮಾಸ್ಕ್ ಹಾಗು ಹೆಡ್ಲೈಟ್ಗಳನ್ನು ಹೊಡೆದು ಹಾಕಿ, ಚಾಕು ತೋರಿಸಿ ಹೆದರಿಸಿ ಆಶಾಂತಿಯನ್ನು ಉಂಟು ಮಾಡಲು ಯತ್ನಿಸಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಶಾಹಿಲ್ ಖಾನ್, 21 ವರ್ಷ, ಕೆಆರ್ ಪುರಂ, ಶಿವಮೊಗ್ಗ ಹಾಗೂ . ಮನ್ಸೂರ್ ಅಹಮ್ಮದ್, 32 ವರ್ಷ, ಭರ್ಮಪ್ಪನಗರ, ಶಿವಮೊಗ್ಗ ಅವರನ್ನು ಜಿಲ್ಲಾ ರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ದೊಡ್ಡಪೇಟೆ ಪೊಲೀಸ್ ಇನ್ಸ್ ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ಬಂಧಿಸಿದ್ದಾರೆ.
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 06 ಪ್ರಕರಣಗಳು ಹಾಗು ಕೋಟೆ ಪೊಲೀಸ್ ಠಾಣೆಯಲ್ಲಿ 01 ಪ್ರಕರಣ ಸೇರಿ ಒಟ್ಟು 7 ಪ್ರಕರಣಗಳನ್ನು ದಾಖಲಿಸಲಾಗಿದೆ.
ಈ ಕೃತ್ಯದ ಹಿಂದೆ ಇರುವ ವ್ಯಕ್ತಿಗಳ ಬಗ್ಗೆ ತನಿಖೆಯನ್ನು ಮಾಡಲಾಗುತ್ತಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
- ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ. - ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. - ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
- ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
*ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
*ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ. - ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.