ಶಿವಮೊಗ್ಗ : ಯುವ ಸಮೂಹಕ್ಕೆ ಸ್ಪೂರ್ತಿ ತುಂಬಿದವರು ಮಾಜಿ ಪ್ರಧಾನಿ ರಾಜೀವ್‌ಗಾಂಧಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಅವರು ಇಂದು ಕಾಂಗ್ರೆಸ್ ಕಚೇರಿ ಯಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರ ಮದಲ್ಲಿ ದಿ.ರಾಜೀವ್‌ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ದೇಶ ಕಂಡ ಶ್ರೇಷ್ಟ ನಾಯಕರಲ್ಲಿ ರಾಜೀವ್‌ಗಾಂಧಿ ಕೂಡ ಒಬ್ಬರು ದೇಶದಲ್ಲಿ ಅಭಿವೃದ್ಧಿಯ ಹರಿಕಾರ ಎಂದೇ ಅವರು ಪ್ರಸಿದ್ಧಿಯಾಗಿದ್ದಾರೆ. ಬಹಳ ಮುಖ್ಯವಾಗಿ ಯುವ ಸಮೂ ಹಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ತಮ್ಮ ಚಿಕ್ಕ ವಯಸ್ಸಿನ ಲ್ಲಿಯೇ ಅಪಾರ ಜ್ಞಾನವನ್ನು ಪಡೆದ ಅವರು ಪ್ರಧಾನಿಯಾದ ನಂತರ ದೇಶ ವನ್ನು ಜ್ಞಾನ ಮತ್ತು ತಂತ್ರಜ್ಞಾನದ ಮೂಲಕ ಸದೃಢವಾಗಿ ಬೆಳೆಸಿದವರು. ಅವರ ಸಾಕ್ಷರತ ಆಂದೋಲನ, ಪಂಚಾಯತ್ ರಾಜ್ ವ್ಯವಸ್ಥೆ, ಪಕ್ಷಾಂ ತರ ತಿದ್ದುಪಡಿ ಕಾಯ್ದೆ, ರೋಜ್‌ಗಾರ್ ಯೋಜನೆ ಮುಂತಾದವು ಇಂದಿಗೂ ವರ್ತಮಾನ ಸ್ಥಿತಿಯಲ್ಲಿವೆ ಎಂದರು.
ಕೋವಿಡ್ ಹಿನ್ನಲೆಯಲ್ಲಿ ಅತ್ಯಂತ ಸರಳವಾಗಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಆಯೋಜಿ ಸಲಾಗಿದೆ. ಅವರ ಪುಣ್ಯಸ್ಮರಣೆಯ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಅತಿ ಹೆಚ್ಚು ಕೊರೋನಾ ಸೋಂಕಿತರ ಮನೆಗಳಿಗೆ ಊಟವನ್ನು ನೀಡಲಾಗುತ್ತಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಳೆದ ೧೯ ದಿನಗಳಿಂದ ನಿರಂತರವಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರಿಗೆ ಹಾಗೂ ವಿವಿಧಡೆಯಲ್ಲಿ ಇರುವ ಅನಾಥರಿಗೆ ಊಟ, ನೀರಿನ ವ್ಯವಸ್ಥೆ ಮಾಡುತ್ತಾ ಬಂದಿದ್ದೇವೆ ಎಂದರು.
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
- ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
- ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
- ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
- ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
- ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
- ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
- ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
- ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
- ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.
ಕಾರ್ಯಕ್ರಮದಲ್ಲಿ ಪ್ರಮುಖರಾದ ಚೇತನ್, ಮಧುಸೂದನ್, ಮಹಮ್ಮದ್ ನಿಹಾಲ್, ಪ್ರಮೋದ್, ಮಂಜುನಾಥ್, ಪುಷ್ಪ, ಮುಜೀದ್, ಶಶಿ, ಜಫರುಲ್ಲಾ, ಚನ್ನವೀರಪ್ಪ, ಸಂತೋಷ್, ವಿನೋದ್ದ, ಚಂದ್ರಶೇಖರ್, ಸತೀಶ್ ಸೇರಿದಂತೆ ಹಲವರಿದ್ದರು.