ಶಿವಮೊಗ್ಗ : ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಮಂಗಳವಾರ 19 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 895 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 640 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 734ಕ್ಕೇರಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

  • ಯಾವ ತಾಲೂಕಿನಲ್ಲಿ ಎಷ್ಟೇಷ್ಟು
  • ಶಿವಮೊಗ್ಗ ತಾಲೂಕಿನಲ್ಲಿ 264,
  • ಭದ್ರಾವತಿಯಲ್ಲಿ 135
  • ತೀರ್ಥಹಳ್ಳಿ 35
  • ಶಿಕಾರಿಪುರ 36
  • ಸಾಗರ 59,
  • ಹೊಸನಗರ 28
  • ಸೊರಬದಲ್ಲಿ 49
  • ಇತರೆ ಜಿಲ್ಲೆಯ 34
  • 23 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ
  • ಜಿಲ್ಲೆಯಲ್ಲಿ 6769 ಸಕ್ರಿಯ ಪ್ರಕರಣಗಳಿವೆ

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ

  • ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
    ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
    ” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
    ” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
  • ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
    ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
  • ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
  • ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
    *ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
    *ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
  • ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.

By admin

ನಿಮ್ಮದೊಂದು ಉತ್ತರ

error: Content is protected !!