ಶಿವಮೊಗ್ಗ: ಕಾನೂನು ಮಾಪನಶಾಸ್ತ್ರ ಇಲಾಖೆಯು ಕೋವಿಡ್-19ರ ಸಮಯದಲ್ಲಿ ಜಿಲ್ಲೆಯಾದ್ಯಂತ ತಪಾಸಣೆ ಕೈಗೊಂಡು ಪದಾರ್ಥಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ತಪ್ಪಿತಸ್ಥ ದಿನಸಿ ವರ್ತಕರ, ಮೆಡಿಕಲ್ ಶಾಪ್ಗಳಲ್ಲಿ ಅನಧಿಕೃತ ಆಕ್ಸಿಮೀಟರ್ ಮತ್ತು ಮಾಸ್ಕ್ಗಳನ್ನು ಮಾರಾಟ ಮಾಡುತ್ತಿರುವ ತಪ್ಪಿತಸ್ಥ ವರ್ತಕರ ವಿರುದ್ಧ ತಪಾಸಣೆ ನಡೆಸಿ 140 ಪ್ರಕರಣಗಳನ್ನು ದಾಖಲಿಸಿ, ರಾಜಿ ಸಂಧಾನದ ಮೂಲಕ ರೂ. ೩.೦೯ ಲಕ್ಷಗಳ ದಂಡ ವಸೂಲಿ ಮಾಡಲಾಗಿದೆ ಎಂದು ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಎಸ್.ಮಂಜುನಾಥ್ ಅವರು ತಿಳಿಸಿದ್ದಾರೆ.
ದಿನಸಿ ಪದಾರ್ಥಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತ್ತಿರುವ ಹಾಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಕಡಿಮೆ ತೂಕ ವಿತರಣೆ ಮಾಡುತ್ತಿರುವ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಶಿವಮೊಗ್ಗ ಜಿಲ್ಲೆಗೆ
ಸಂಬಂಧಪಟ್ಟಂತೆ ಮೊ.ಸಂ.: 9481010281, ಶಿವಮೊಗ್ಗ ನಗರದ ದೂರಿಗೆ ಸಂಬಂಧಪಟ್ಟಂತೆ ಮೊ.ಸಂ.: 8971271523, ಶಿವಮೊಗ್ಗ ಗ್ರಾಮಾಂತರ ಹಾಗೂ ಹೊಸನಗರ, ಸಾಗರ, ಸೊರಬ ತಾಲೂಕಿಗೆ ಸಂಬಂಧಪಟ್ಟಂತೆ ಮೊ.ಸಂ.: 9008506881 ಭದ್ರಾವತಿ, ತೀರ್ಥಹಳ್ಳಿ ತಾಲೂಕಿಗೆ ಸಂಬಂಧಪಟ್ಟಂತೆ ಮೊ.ಸಂ.: 7019586800 ಹಾಗೂ ಶಿಕಾರಿಪುರ ತಾಲೂಕು ಮೊ.ಸಂ.: 9845343778 ಗಳಿಗೆ ಸಂಪರ್ಕಿಸಿ ದೂರು ನೀಡುವಂತೆ ಇಲಾಖೆಯ ಸಹಾಯಕ ನಿಯಂತ್ರಕ ಎಸ್.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
- ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
- ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
- ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
- ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
- ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
- ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
- ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
- ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
- ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
- ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.