ಶಿವಮೊಗ್ಗ: ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿ ಯಲ್ಲಿದ್ದು, ಶುಕ್ರವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 652ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ.
692ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 755 ಕ್ಕೇರಿದೆ.
ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ
- ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ. - ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. - ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
- ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
*ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
*ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ. - ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.
- ಶಿವಮೊಗ್ಗ ತಾಲೂಕಿನಲ್ಲಿ 260,
- ಭದ್ರಾವತಿಯಲ್ಲಿ 124
- ತೀರ್ಥಹಳ್ಳಿ 51,
- ಶಿಕಾರಿಪುರ 78
- ಸಾಗರ 53,
- ಹೊಸನಗರ 36
- ಸೊರಬದಲ್ಲಿ 60
- ಇತರೆ ಜಿಲ್ಲೆಯ 30ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
- 31 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಪ್ರಸ್ತುತ 7373 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.