ಸಿ.ಬಿ.ಆರ್ ರಾಷ್ಟ್ರೀಯ ಕಾನೂನು ಕಾಲೇಜು ಶಿವಮೊಗ್ಗ

ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ಕ್ರಾಸ್ ಘಟಕದ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರವನ್ನು ಲಾಕ್ಡೌನ್ ನಿಂದಾಗಿ ರೋಗಿಗಳಿಗೆ ಸಮಸ್ಯೆ ಆಗುತ್ತಿರುವ ದೃಷ್ಟಿಯಿಂದ ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದರಿಂದ 32 ರಕ್ತದಾನಿಗಳು ರಕ್ತದಾನವನ್ನು ಮಾಡಿದರು

ಈ ಒಂದು ಶಿಬಿರದ ಅಧ್ಯಕ್ಷತೆಯನ್ನು ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜು ಪ್ರಾಂಶುಪಾಲರಾದ ಪ್ರೊಫೆಸರ್ ಡಾ ಜಿ ಆರ್ ಜಗದೀಶ್ ರವರ ವಹಿಸಿದ್ದು. ಉದ್ಘಾಟನೆಯನ್ನು ರೋಟರಿ ರಕ್ತನಿಧಿ ಕೇಂದ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಶ್ರೀಯುತ ಸತೀಶ್ ರವರು ನೆರವೇರಿಸಿದರು, ಕಾಲೇಜಿನ ಎನ್ಎಸ್ ಎಸ್ ಸಂಯೋಜನಾ ಅಧಿಕಾರಿಗಳಾದ ಡಾ ಕಾಂತರಾಜ್ ಎಸ್ , ಹಾಗೂ ಸಹಾಯಕ ಪ್ರಾಧ್ಯಾಪಕರು ಛಾಯಾ ಕುಮಾರ್, ಕಾಲೇಜ್ ವಿದ್ಯಾರ್ಥಿಗಳಾದ ಸುರೇಶ್ ಬಾಬು, ಸತ್ಯಪ್ರಕಾಶ್, ಪ್ರಣಿತ್, ವಿಜಯೇಂದ್ರ, ಪ್ರಮೋದ್ ಭಟ್ ಮತ್ತು ಅನೇಕ ವಿದ್ಯಾರ್ಥಿಗಳು ರಕ್ತದಾನಿಗಳು ಪಾಲ್ಗೊಂಡಿದ್ದರು.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ

  • ಕೊರೋನಾ ಮಹಾಮಾರಿ ರಾಜ್ಯಾದ್ಯಂತ ವ್ಯಾಪಿಸುತ್ತಿದೆ.
    ಕೋವಿಡ್ ಮಾರ್ಗಸೂಚಿ ತಪ್ಪದೇ ಪಾಲಿಸಿ, ಆರೋಗ್ಯದಿಂದಿರಿ. ರಾಜ್ಯ ಸರ್ಕಾರದಿಂದ ಮೇ. 10 ರಿಂದ ಮೇ.24 ರ ಬೆಳಿಗ್ಗೆ 6 ರವರೆಗೆ ಲಾಕ್ ಡೌನ್ ವಿಧಿಸಲಾಗಿರುತ್ತದೆ.
    ” ಯಾವುದೇ ಮದುವೆಗೆ ಗರಿಷ್ಟ 40 ಜನರಿಗೆ ಮಾತ್ರ ಅವಕಾಶ. ಪಾಸ್ ಕಡ್ಡಾಯ.
    ” ನಿಧನ-ಶವಸಂಸ್ಕಾರ ಐವರಿಗೆ ಮಾತ್ರ ಅವಕಾಶ.
  • ಪ್ರತಿದಿನ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ, ಮನೆಗೆ ಬೇಕಾದ ಅವಶ್ಯಕ ಸಾಮಾಗ್ರಿಗಳು, ಆಹಾರ, ದಿನಸಿ, ಹಣ್ಣು, ತರಕಾರಿ, ಮೀನು, ಮಾಂಸ ಹಾಗೂ ಮದ್ಯ , ಡೈರಿ ಮತ್ತು ಹಾಲಿನ ಬೂತ್ ಗಳು ಹೋಟೆಲ್ ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಕಾರ್ಯ ನಿರ್ವಹಿಸಲಿವೆ.
    ಶಿವಮೊಗ್ಗ ನಗರದ ಆರು ಭಾಗದಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
  • ಬ್ಯಾಂಕ್, ಎಟಿಎಂ ತೆರೆದಿರುತ್ತದೆ.
  • ಅಗತ್ಯ ವೈದ್ಯಕೀಯ ಸೇವೆಗಳು ದಿನದ 24 ಗಂಟೆಗಳು ಕಾರ್ಯನಿರ್ವಹಿಸಲಿವೆ.
    *ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ.
    *ನೀವು ಆರೋಗ್ಯವಾಗಿರಿ – ಸಮಾಜವನ್ನು ಆರೋಗ್ಯವಾಗಿಡಿ.
  • ನಿಯಮ ಪಾಲನೆ ಮಾಡಿ – ದಂಡ ಪಾವತಿಯಿಂದ ದೂರವಿರಿ.

By admin

ನಿಮ್ಮದೊಂದು ಉತ್ತರ

error: Content is protected !!