ಬೆಂಗಳೂರು: ರಾಜ್ಯ ಎಸ್​​ಎಸ್​ಎಲ್​ಸಿ ಫಲಿತಾಂಶವನ್ನು ನಾಳೆಯೇ ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರಿಗೆ ಎಸ್​ಎಸ್​ಎಲ್​ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ನಿನ್ನೆಯೇ ಫಲಿತಾಂಶ ಸಲ್ಲಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಿ ಫಲಿತಾಂಶ ಪ್ರಕಟ ಮಾಡಲು ಅಂತಿಮ ನಿರ್ಧಾರ ಕೈಗೊಳ್ಳಲಾಗಿದ್ದು, ನಾಳೆ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

By admin

ನಿಮ್ಮದೊಂದು ಉತ್ತರ

error: Content is protected !!