ಬೆಂಗಳೂರು: ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಸುರಿದ ಭಾರೀ ಮಳೆ ಮತ್ತು ಮಹಾರಾಷ್ಟ್ರದ ಪ್ರವಾಹದಿಂದಾಗಿ ತೀವ್ರ ಹಾನಿಯಾದ ಹಿನ್ನೆಲೆಯಲ್ಲಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತೀವೃಷ್ಟಿ ಪೀಡಿತ ತಾಲೂಕುಗಳೆಂದು ಸರಕಾರ ಘೋಷಣೆ ಮಾಡಿದೆ. ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಎಂ.ಎಸ್.ರಶ್ಮಿ ಬುಧವಾರ ಈ ಆದೇಶ ಹೊರಡಿಸಿದ್ದಾರೆ.
ಅತೀವೃಷ್ಟಿ ಪೀಡಿತ ತಾಲೂಕುಗಳಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ, ಶಿಕಾರಿಪುರ, ಶಿವಮೊಗ್ಗ, ಸೊರಬ ತಾಲೂಕುಗಳು ಸೇರಿವೆ.
ಚಿಕ್ಕಮಗಳೂರಿನ ನರಸಿಂಹರಾಜಪುರ, ದಾವಣಗೆರೆ ಜಿಲ್ಲೆಯ ಹರಿಹರ, ಹೊನ್ನಾಳಿ, ನ್ಯಾಮತಿ ತಾಲೂಕುಗಳ ಅತೀವೃಷ್ಠಿ ಪೀಡಿತ ತಾಲೂಕುಗಳೆಂದು ಸರಕಾರ ಘೋಷಿಸಿದೆ. ಈ ತಾಲೂಕುಗಳೂ ಸೇರಿ ಉತ್ತರ ಕರ್ನಾಟಕ ಜಿಲ್ಲೆಗಳ 61 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ.