ಭದ್ರಾವತಿ: ರಾಜ್ಯದಲ್ಲಿ ಕೊರೊನಾ ರೂಪಾಂತರದ ಓಮ್ರಿಕಾನ್ ಹಾವಳಿ ಹೆಚ್ಚುತ್ತಿದೆ. ದುರಂತವೆಂದರೆ ಈ ಮಾಯೆ ನಿನ್ನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲೂ ಕಂಡು ಬಂದು ಆತಂಕ ಸೃಷ್ಟಿಸಿದೆ.
ರಾಜ್ಯದಲ್ಲಿ ನಿನ್ನೆ ಐವರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇದರಲ್ಲಿ ಭದ್ರಾವತಿಯ ಓರ್ವ ಯುವತಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.


ಈ ಕುರಿತಂತೆ ಸ್ವತಃ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಒಟ್ಟು 5 ಓಮಿಕ್ರಾನ್ ಹೊಸ ಪ್ರಕರಣ ಪತ್ತೆಯಾಗಿದೆ. ಇದರಲ್ಲಿ ಭದ್ರಾವತಿಯ 20 ವರ್ಷದ ಓರ್ವ ಯುವತಿಯಲ್ಲೂ ಸಹ ಸೋಂಕು ದೃಢಪಟ್ಟಿದೆ ಎಂದಿದ್ದಾರೆ.
ಕಳೆದ ಎರಡು ವಾರಗಳ ಹಿಂದೆ ಭದ್ರಾವತಿ ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 24 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿ ಕಾಲೇಜು ಹಾಸ್ಟೆಲ್ ಹಾಗೂ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿತ್ತು.

ಇವರ ದ್ರವವನ್ನು ಉನ್ನತ ಪರೀಕ್ಷೆಗಾಗಿ ಬೆಂಗಳೂರಿಗೆ ರವಾನಿಸಲಾಗಿತ್ತು. ಇದರ ವರದಿ ನಿನ್ನೆ ರಾತ್ರಿ ಬಂದಿದ್ದು, ಈ ಸೋಂಕಿತ ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿನಿಗೆ ಓಮಿಕ್ರಾನ್ ದೃಢಪಟ್ಟಿದೆ ಎಂದು ಹೇಳಲಾಗಿದ್ದರೂ, ಸ್ಥಳೀಯ ಅಧಿಕಾರಿಗಳು ಇನ್ನೂ ಅಧಿಕೃತವಾಗಿ ಇದನ್ನು ಖಚಿತಪಡಿಸಿಲ್ಲ.

By admin

ನಿಮ್ಮದೊಂದು ಉತ್ತರ

error: Content is protected !!