ಶಿವಮೊಗ್ಗ: ಹಿಂದುಳಿದ ವರ್ಗಗಳ ಏಳಿಗೆಯನ್ನು ಕಾಂಗ್ರೆಸ್ ಎಂದೂ ಬಯಸಲಿಲ್ಲ. ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಂಡರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಅವರು ಇಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಶುಭಮಂಗಳ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
ಸ್ವಾತಂತ್ರ್ಯದ ನಂತರ ಈ ದೇಶ ಆಳಿದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳು ಸೇರಿದಂತೆ ಯಾವುದೇ ಕೆಳ ಸಮುದಾಯದ ಕಲ್ಯಾಣಕ್ಕಾಗಿ ಏನೂ ಮಾಡಲಿಲ್ಲ. ಅವರನ್ನು ವೋಟ್ ಹಾಕಲು ಮಾತ್ರ ಬಳಸಿಕೊಂಡು ತಾವು ಸಿಂಹಾಸನದಲ್ಲಿ ಕೂತು ಮತ್ತಷ್ಟು ಶೋಷಿತರನ್ನಾಗಿ ಮಾಡಿದರು ಎಂದರು.
ಬಿಜೆಪಿ ಈಗ ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಮೋದಿ ಅವರೂ ಹಿಂದುಳಿದವರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ರಾಜ್ಯ ಸರ್ಕಾರವಂತೂ ಒಂದು ರೀತಿಯಲ್ಲಿ ಶೋಷಿತರೇ ಆಗಿದ್ದ ಹಿಂದುಳಿದ ವರ್ಗದ ವರಿಗೆ ಶಿಕ್ಷಣ, ಆರೋಗ್ಯ, ವಿವಿಧ ಯೋಜನೆ ಗಳನ್ನು ತಲುಪಿಸುವ ಮೂಲಕ ಅವರನ್ನು ನಿಜವಾಗಿ ಮುಖ್ಯವಾಹಿನಿಗೆ ತರುತ್ತಿದೆ. ಬಿಜೆಪಿ ಈಗಾಗಲೇ ಒಬಿಸಿ ಸಮುದಾಯ ವನ್ನು ತಲುಪಿದೆ ಎಂದರು.


ಮತಾಂತರ ಎಂಬುದು ದೊಡ್ಡ ಪಿಡು ಗಾಗಿದೆ. ಇದು ಕೇವಲ ದಲಿತರನ್ನು ಮಾತ್ರ ಸುತ್ತಿಕೊಂಡಿಲ್ಲ. ಹಿಂದುಳಿದ ವರ್ಗಗಳ ಬಳಿಯೂ ಬಂದು ನಿಂತಿದೆ. ಹಾಗಾಗಿ, ಮತಾಂತರ ನಿಷೇಧ ಕಾಯ್ದೆಯನ್ನು ನಾವು ಜಾರಿಗೆ ತಂದೇ ತರುತ್ತೇವೆ. ಬಲವಂತದ ಮತಾಂತರ ಮಾಡಿದರೆ ಶಿಕ್ಷೆ ಖಚಿತ ಎಂದು ಕಾಯ್ದೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಮತಾಂತರ ವಾಗಿಯೂ ಸೌಲಭ್ಯಗಳನ್ನು ಬಳಸಿಕೊಳ್ಳುತ್ತಿ ರುವ ಜಾತಿಗಳ ಜನರನ್ನು ನಾವು ನೋಡುತ್ತಿ ದ್ದೇವೆ. ಇನ್ನುಮುಂದೆ ಅವರಿಗೆ ಮೂಲ ಜಾತಿಯ ಸೌಲಭ್ಯ ಪಡೆಯಲು ಯಾವುದೇ ಅವಕಾಶ ಇರುವುದಿಲ್ಲ. ಆಮಿಷವೊಡ್ಡಿ ಮತಾಂತರ ಮಾಡಿದವರಿಗೆ ಇಲ್ಲಿಯವರೆಗೂ ಶಿಕ್ಷೆ ಎಂಬುದು ಇರಲಿಲ್ಲ. ಆದರೆ, ಈಗ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಅಳವಡಿಸಲಾಗಿದೆ ಎಂದರು.
ನಮ್ಮದು ದೇಶ ಕಟ್ಟುವ ಸಿದ್ಧಾಂತ. ಇಲ್ಲಿ ರಾಷ್ಟ್ರೀಯತೆಗೆ ಹೆಚ್ಚು ಒತ್ತು. ಹಿಂದೂ ಧರ್ಮವೆಂದರೆ ಕೇವಲ ಜಾತಿಯಲ್ಲ, ಅದೊಂದು ಸಂಸ್ಕೃತಿಯೇ ಆಗಿದೆ. ಎಲ್ಲಾ ಜಾತಿಗಳ ರಕ್ಷಣೆ ಇಲ್ಲಿ ಆಗುತ್ತದೆ. ರಾಜ್ಯದಲ್ಲಿ ೧೭ ಜನ ಹಿಂದುಳಿದ ವರ್ಗಗಳಿಗೆ ಸೇರಿದ ಶಾಸಕರಿದ್ದಾರೆ. ಸಂಸದರು, ವಿಧಾನ ಪರಿ ಷತ್, ಗ್ರಾಪಂ, ಜಿಪಂ, ತಾಪಂ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರು ಆಯ್ಕೆಯಾಗಿದ್ದಾರೆ. ಈ ಎಲ್ಲರ ಸಹಕಾರದಲ್ಲಿ ಹಿಂದುಳಿದ ವರ್ಗಗಳನ್ನು ಮತ್ತಷ್ಟು ಗಟ್ಟಿಯಾಗಿ ಬಿಜೆಪಿ ಮಾಡುತ್ತದೆ ಎಂದರು.


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಹಿಂದುಳಿದ ವರ್ಗಗಳಿಗೆ ಯಾವ ಕೀಳರಿಮೆಯೂ ಬೇಡ. ಭಾರತೀಯ ಪುರಾಣದಲ್ಲಿ, ಪುಣ್ಯ ಕತೆಗಳಲ್ಲಿ, ಇತಿಹಾಸ ದಲ್ಲಿ ಹಿಂದುಳಿದ ವರ್ಗಗಳ ನಾಯಕರು ರಾಷ್ಟ್ರ ಭಕ್ತಿಯ ಜೊತೆಗೆ ಬ್ರಿಟೀಷರ ವಿರುದ್ಧ ಹೋರಾಟ, ಸ್ವಾತಂತ್ರ್ಯಕ್ಕಾಗಿ ಹೋರಾಟ, ದೇವರನ್ನು ಒಲಿಸಿಕೊಳ್ಳುವ ರೀತಿ, ಸಾಹಿತ್ಯ, ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಇವರ್ಯಾರನ್ನು ನಾವು ಹಿಂದುಳಿದ ವರ್ಗ ಗಳಿಂದ ಬಂದವರು ಎಂದು ಹೇಳಿಲ್ಲ ಎಂದರು.
ಅಹಲ್ಯಬಾಯಿ, ಶಿವಾಜಿ, ಸಂಗೊಳ್ಳಿ ರಾಯಣ್ಣ, ಭಕ್ತ ಕನಕದಾಸ, ಮಡಿವಾಳ ಮಾಚಯ್ಯ, ಅಂಬಿಗರ ಚೌಡಯ್ಯ ಹೀಗೆ ಹಿಂದುಳಿದ ವರ್ಗಗಳ ಎಲ್ಲಾ ಜಾತಿಗಳ ಶರಣರು ಭಾರತೀಯ ಸಂಸ್ಕೃತಿಯನ್ನು ಕಟ್ಟಿ ಬೆಳೆಸಿದ್ದಾರೆ ಎಂದರು.
ಶ್ರೀಕೃಷ್ಣನನ್ನು ನೋಡಲು ಹೋದ ಕನಕ ದಾಸರಿಗೆ ಯಾರೋ ಏನೋ ಹೇಳಿದರು ಎಂದು ಒಳಗೆ ಬಿಡಲಿಲ್ಲ. ಆದರೆ, ಕನಕದಾ ಸರು ಶ್ರೀಕೃಷ್ಣನನ್ನೇ ತಮ್ಮತ್ತ ತಿರುಗಿಸಿ ಕೊಂಡರು. ಇಂತಹ ಪವಿತ್ರ ಸ್ಥಾನಕ್ಕೆ ಹೋಗಲ್ಲ ಎನ್ನುವ ರಾಜಕಾರಣಿಗಳು ನಮ್ಮ ಲ್ಲಿದ್ದಾರೆ. ಅವರೆಲ್ಲ ಮಣ್ಣು ಪಾಲಾಗುತ್ತಾರೆ ಎಂದು ವ್ಯಂಗ್ಯವಾಡಿದರು.
ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ಪ್ರಾಸ್ತಾವಿಕವಾಗಿ ಮಾತನಾಡಿ, ಹಿಂದುಳಿದ ವರ್ಗಗಳ ರಕ್ಷಣೆ ಗಾಗಿಯೇ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಸ್ತಿತ್ವಕ್ಕೆ ಬಂದಿದೆ. ಇದು ಪ್ರತಿ ಗ್ರಾಮ ಪಂಚಾಯಿತಿ, ಶಕ್ತಿ ಕೇಂದ್ರಗಳು, ಬೂತ್ ಮಟ್ಟದಲ್ಲಿ ಕಾರ್ಯನಿರ್ವಹಿಸಲಿದೆ. ಸರ್ಕಾರದ ಯಾವುದೇ ಯೋಜನೆಗಳು ಹಿಂದುಳಿದ ವರ್ಗಗಳ ಕಟ್ಟಕಡೆಯ ಪ್ರಜೆಗೂ ತಲುಪಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ಮತ್ತು ಇದನ್ನು ಪ್ರಚಾರ ಮಾಡುವುದೇ ಮೋರ್ಚಾದ ಬಹುದೊಡ್ಡ ಕೆಲಸವಾಗಿದೆ. ಮುಂದಿನ ದಿನಗಳಲ್ಲಿ ಶೇ. ೧೦೦ ರಷ್ಟು ಹಿಂದುಳಿದ ವರ್ಗಗಳ ಕಲ್ಯಾಣ ಆಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಶಾಸಕರಾದ ಡಿ.ಎಸ್. ಅರುಣ್, ರುದ್ರೇ ಗೌಡ, ಹರತಾಳು ಹಾಲಪ್ಪ, ಭಾನುಪ್ರಕಾಶ್, ಅಶ್ವತ್ಥನಾರಾಯಣ್, ಯಶ್ ಪಾಲ್ ಸುವರ್ಣ, ಅರುಣ್ ಜೀ, ಆರ್.ಕೆ. ಸಿದ್ಧರಾ ಮಣ್ಣ, ಟಿ.ಡಿ. ಮೇಘರಾಜ್, ದತ್ತಾತ್ರಿ, ಸುನಿತಾ ಅಣ್ಣಪ್ಪ, ಚನ್ನಬಸಪ್ಪ, ಜ್ಯೋತಿ ಪ್ರಕಾಶ್, ಗುರುಮೂರ್ತಿ, ವಿವೇಕಾನಂದ, ಮಾಲತೇಶ್, ಅಶೋಕ್ ಮೂರ್ತಿ ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!