ಕಾಲ್ಪನಿಕ ಚಿತ್ರ
ತೀರ್ಥಹಳ್ಳಿ: ತಾಲ್ಲೂಕಿನ ಕೋಣಂದೂರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್ ಅವರು ಕೋಣಂದೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.