ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಬೆಡ್‌ಗಳು ಸೇರಿ ದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಜ್ಜು ಗೊಳಿಸಿದ್ದು, ಜನರು ಗಾಬರಿಯಾಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ೨೭೦೨೯ ಜನರ ಗಂಟಲ ದ್ರವ ಪರೀಕ್ಷೆ ನಡೆಸಲಾಗಿದೆ. ೨೪೮೯೯ ನೆಗೆಟಿವ್ ವರದಿ ಬಂದಿದ್ದು ೧೭೨೭ ಪಾಸಿಟಿವ್ ಕಂಡು ಬಂದಿದೆ. ಇವರ ಪೈಕಿ ೯೨೫ಮಂದಿ ಗುಣಮು ಖರಾಗಿ ಮನೆಗೆ ಮರಳಿದ್ದಾರೆ. ೭೭೧ಮಂದಿ ಮಾತ್ರ ವಿವಿಧ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸ ಲಾಗುತ್ತಿದ್ದು, ಪ್ರತಿ ದಿನ ೯೫೦ ಜನರ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದಾಗಿ ಪಾಸಿಟಿವ್ ಪ್ರಕರಣಗಳಲ್ಲಿ ಹೆಚ್ಚಳ ಉಂಟಾ ಗಿದೆ ಎಂದು ಹೇಳಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗ ಲಕ್ಷಣವಿರುವರಿಗೆ ಚಿಕಿತ್ಸೆ ನೀಡಲಾ ಗುತ್ತಿದ್ದು, ಪ್ರಸ್ತುತ ೨೩೩ಮಂದಿ ಇದ್ದಾರೆ. ವಿವಿಧ ಕಡೆಗಳಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ ಸೆಂಟರ‍್ಗಳಲ್ಲಿ ೪೩೬ಮಂದಿ ಇದ್ದಾರೆ. ಇನ್ನೂ ೫೫೦ಬೆಡ್ ಉಪಯೋಗಕ್ಕೆ ಸಿದ್ಧವಾಗಿದ್ದು, ಇನ್ನೂ ೪೦೦ ಬೆಡ್‌ಗಳು ಸಜ್ಜುಗೊಳಿಸಲಾಗುತ್ತಿದೆ. ಪ್ರಸ್ತುತ ೩೭ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ೩೦೦ಬೆಡ್‌ಗಳ ಸೌಲಭ್ಯ ಸಿದ್ಧವಿದೆ ಎಂದರು.
ಪ್ರಸ್ತುತ ೨೮ವೆಂಟಿಲೇಟರ‍್ಗಳು ಮೆಗ್ಗಾನ್‌ನಲ್ಲಿ ಲಭ್ಯವಿದ್ದು, ಇನ್ನೂ ೩೭ವೆಂಟಿಲೇಟರ‍್ಗಳು ಒಂದು ವಾರದ ಒಳಗಾಗಿ ಲಭ್ಯವಾಗಲಿವೆ. ಹೆಚ್ಚುತ್ತಿ ರುವ ಕೊರೊನಾ ಪಾಸಿಟಿವ್ ಪ್ರಕರಣಗಳಿಗೆ ತಕ್ಕಂತೆ ಮೂಲಸೌಲಭ್ಯಗಳನ್ನು ಕೂಡಾ ಹೆಚ್ಚಿಸಲಾಗುತ್ತಿದೆ.
ಸಹಾಯವಾಣಿ: ಕೋವಿಡ್ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ‍್ಗಳಲ್ಲಿ ಚಿಕಿತ್ಸೆ ಗಾಗಿ ದಾಖಲಾದವರು ತಮ್ಮ ಸಮಸ್ಯೆ ಅಹವಾಲುಗಳನ್ನು ಸಹಾಯವಾಣಿ ಸಂಖ್ಯೆ ೦೮೧೮೨-೨೨೧೦೧೦, ೦೮೧೮೨-೨೨೦೦೮೨ ಕರೆ ಮಾಡಿ ಸಲ್ಲಿಸಬಹುದಾಗಿದೆ. ಅಹವಾಲು ಗಳಿಗೆ ತಕ್ಷಣ ಪ್ರತಿಕ್ರಿಯಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ ಸುರಗಿಹಳ್ಳಿ ಉಪಸ್ಥಿತರಿದ್ದರು.

ರೋಗ ಲಕ್ಷಣವಿಲ್ಲದ ಪಾಸಿಟಿವ್ ವ್ಯಕ್ತಿಗಳಿಗೆ ಮನೆಯಲ್ಲಿ ಐಸೋಲೇಷ್‌ಗೆ ವ್ಯವಸ್ಥೆ ಇದ್ದರೆ ಅನುಮತಿ ನೀಡಲಾಗುತ್ತಿದೆ. ಅಂತಹ ವ್ಯಕ್ತಿಗಳನ್ನು ಆರಂಭದಲ್ಲಿ ಮೆಗ್ಗಾನ್‌ಗೆ ಕರೆ ತಂದು ಎದೆ ಎಕ್ಸ್‌ರೇ, ರಕ್ತ ಪರೀಕ್ಷೆ ಇತ್ಯಾದಿ ಕಡ್ಡಾಯ ತಪಾಸಣೆಗಳನ್ನು ಮಾಡಲಾಗು ವುದು. ಆ ಬಳಿಕ ವೈದ್ಯರ ತಂಡ ಮನೆಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದ ಬಳಿಕ ಅಂಬ್ಯುಲೆನ್ಸ್ ಮೂಲಕ ಮನೆಗೆ ೨೪ಗಂಟೆಯೊಳಗಾಗಿ ಕರೆ ತರಲಾಗುವುದು. ಹೋಂ ಕ್ವಾರೆಂಟೈನ್‌ನಲ್ಲಿರುವವರನ್ನು ತಪಾಸಣೆ ನಡೆಸಲು ಪ್ರಸ್ತುತ ಶಿವಮೊಗ್ಗ ನಗರದಲ್ಲಿ ೫ತಂಡಗಳನ್ನು ರಚಿಸಲಾಗಿದೆ. ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು.
-ಕೆ.ಬಿ.ಶಿವಕುಮಾರ್, ಜಿಲ್ಲಾಧಿಕಾರಿ

By admin

ನಿಮ್ಮದೊಂದು ಉತ್ತರ

error: Content is protected !!