ಸಾಗರ : ಶಿವಮೊಗ್ಗದಲ್ಲಿ ಹರ್ಷ ಕಗ್ಗೊಲೆ ಖಂಡಿಸಿ ಕ್ಷತ್ರೀಯ ಸಮಾಜದ ವತಿಯಿಂದ ಫೆ. 28ರಂದು ಸೋಮವಾರ ಸಾಗರ್ ಬಂದ್‌ಗೆ ಕರೆ ನೀಡುತ್ತಿದ್ದೇವೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಪ್ರಕಾಶ್ ಕುಂಠೆ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು, ಅಂಗಡಿ, ಹೋಟೆಲ್ ಮಾಲೀಕರು ಸ್ವಯಂಪ್ರೇರಿತವಾಗಿ ಅಂಗಡಿಮುಂಗಟ್ಟುಗಳನ್ನು ಬಂದ್ ಮಾಡುವ ಮೂಲಕ ಸಾಗರ್ ಬಂದ್‌ಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಹರ್ಷ ಅವರನ್ನು ಅತ್ಯಂತ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹರ್ಷ ಅವರನ್ನು ಹತ್ಯೆ ಮಾಡಿದ ಕೊಲೆಪಾತಕರನ್ನು ಗಲ್ಲಿಗೇರಿಸಬೇಕು. ಹರ್ಷ ಅವರನ್ನು ಹತ್ಯೆ ಮಾಡಿರುವ ಕೃತ್ಯವನ್ನು ಖಂಡಿಸಿ ಗಣಪತಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ನಗರ ವ್ಯಾಪ್ತಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಹಳೆ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಸಭೆ ನಡೆಸಲಾಗುತ್ತದೆ ಎಂದು ಹೇಳಿದರು.
ಲಾಗಾಯ್ತಿನಿಂದಲೂ ಕ್ಷತ್ರೀಯ ಧರ್ಮ ಪಾಲನೆ ಮಾಡಿಕೊಂಡು ಬರುತ್ತಿರುವ ನಾವು ಜನರನ್ನು ರಕ್ಷಣೆ ಮಾಡುತ್ತಾ ಬರುತ್ತಿದ್ದೇವೆ. ಇದೀಗ ನಮಗೆ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಮುಂದೆ ಇಂತಹ ದುರ್ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಸರ್ಕಾರ ಮುಂಜಾಗೃತೆ ವಹಿಸಬೇಕು ಎಂದು ಒತ್ತಾಯಿಸಿದರು.
ಗೋಷ್ಟಿಯಲ್ಲಿ ಸಮಾಜದ ತಾಲ್ಲೂಕು ಅಧ್ಯಕ್ಷ ವಿಜಯಕುಮಾರ್, ಭಾಹುಸಾರ ಕ್ಷತ್ರೀಯ ಸಮಾಜದ ಅಧ್ಯಕ್ಷ ನಾಗರಾಜ್ ಲಾಳಂಕೆ, ಪ್ರಮುಖರಾದ ಬಾಲಕೃಷ್ಣ ಗುಳೇದ್, ರಾಜೇಂದ್ರ ಸಿಂಗ್, ರಾಘವೇಂದ್ರ ಬಂಬೋರೆ, ರಾಘವೇಂದ್ರ ಹಾಜರಿದ್ದರು.