ಶಿವಮೊಗ್ಗ: ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ. ಜೀವನದ ಎಲ್ಲ ಹಂತಗಳಲ್ಲಿಯೂ ಕಾನೂನಿನ ತಿಳವಳಿಕೆ ಉಪಯುಕ್ತವಾಗಿರುತ್ತದೆ ಎಂದು ಜಿಲ್ಲಾ ನ್ಯಾಯಾಧೀಶ, ಫೋಕ್ಸೋ ಕಾಯಿದೆ ಮುಖ್ಯಸ್ಥರಾದ ಬಿ.ಎಚ್. ದಯಾನಂದ ಹೇಳಿದರು.
ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿ ಸಿದ್ದ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ಉದ್ಘಾಟನೆ ಹಾಗೂ ಕಾನೂನು ಅರಿವು ಕಾರ್ಯಕ್ರಮದ ಮಾಹಿತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾನೂನಿನ ತಿಳವಳಿಕೆಯಿಂದ ಪ್ರತಿಯೊಬ್ಬ ರಿಗೂ ಸಿಗುವ ಹಕ್ಕು ಹಾಗೂ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗಲಿದೆ. ಕಾನೂನು ಬಿಟ್ಟು ನಾವು ಬದುಕಲು ಸಾಧ್ಯವಿಲ್ಲ. ಕಾನೂನಿನ ಬಗ್ಗೆ ಪ್ರತಿಯೊಬ್ಬರು ಮಾಹಿತಿ ಹೊಂದಬೇಕು ಎಂದು ತಿಳಿಸಿದರು.
ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಎಚ್.ಎಂ.ಸುರೇಶ್ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶಗಳ ಚಿತ್ರಣ ಪರಿಚಯ ಆಗು ವುದರ ಜತೆಯಲ್ಲಿ ಸೇವಾ ಮನೋಭಾವನೆ, ಗ್ರಾಮೀಣ ಬದುಕು, ಸಹಬಾಳ್ವೆ ಹಾಗೂ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯ ಅರಿವು ಮೂಡುತ್ತದೆ. ಇಂತಹ ಶಿಬಿರಗಳು ಯಶಸ್ವಿಯಾಗುವಲ್ಲಿ ಗ್ರಾಮಸ್ಥರ ಸಹಕಾರ ಮುಖ್ಯವಾಗಿರುತ್ತದೆ ಎಂದು ಹೇಳಿದರು.
ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ಪರಿಸರ ನಾಗರಾಜ್, ಎನ್.ಎಸ್.ಎಸ್. ಧ್ಯೇಯೋದ್ದೇ ಶಗಳು ಹಾಗೂ ವಿದ್ಯಾರ್ಥಿಗಳು ಹೇಗೆ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್ಕುಮಾರ್, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಪ್ರೊ. ಕೆ.ಎಂ.ನಾಗ ರಾಜು, ಪ್ರೊ. ಎಸ್.ಜಗದೀಶ್, ಪ್ರೊ.ಮಂಜು ನಾಥ್, ರವಿಕುಮಾರ್, ರಾಘವೇಂದ್ರ ಶೇಟ್, ಸತೀಶ್, ರಶ್ಮಿ, ಇನ್ನರ್ವ್ಹೀಲ್ ಕಾರ್ಯದರ್ಶಿ ಬಿಂದು ವಿಜಯ್ಕುಮಾರ್, ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.
ಎಲ್ಲರ ಹಕ್ಕುಗಳ ಸಂರಕ್ಷಣೆಗೆ ಕಾನೂನು ಬದ್ಧವಾಗಿದೆ. ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸುವ ಕೆಲಸ ಪ್ರಾಧಿಕಾರದಿಂದ ನಿರಂತರವಾಗಿ ನಡೆಯುತ್ತಿದೆ. ಉಚಿತ ಕಾನೂನು ನೆರವು ಮತ್ತು ಸಲಹೆ ನೀಡುವುದು ಪ್ರಾಧಿಕಾರದ ಉದ್ದೇಶವಾಗಿದೆ.
-ಕೆ.ಎನ್.ಸರಸ್ವತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ