ಶಿವಮೊಗ್ಗ, ಮಾ.21: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 26 ಮತ್ತು 27 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ iಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಈ ಕ್ರೀಡಾಕೂಟವನ್ನು ಮಾರ್ಚ್ 26 ರಂದು ಸಂಜೆ 4.30ಕ್ಕೆ ನೆಹರೂ ಕ್ರೀಡಾಂಗಣದಲ್ಲಿ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗೌರವ ಉಪಸ್ಥಿತಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉದ್ಘಾಟಿಸುವರು. ಗ್ರಾಮೀಣಾಭಿವೃದ್ದಿ, ಪಂಚಾಯತ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧ್ಯಕ್ಷತೆ ವಹಿಸುವರು. ಸಂಸದ ಬಿ.ವೈ.ರಾಘವೇಂದ್ರ ಅವರು ಕ್ರೀಡಾಜ್ಯೋತಿ ಸ್ವೀಕರಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಧ್ವಜಾರೋಹಣ ನೆರವೇರಿಸುವರು.


ಈ ಸಂದರ್ಭದಲ್ಲಿ ಶಾಸಕರಾದ ಹರತಾಳು ಹಾಲಪ್ಪ, ಎಸ್.ಕುಮಾರ್ ಬಂಗಾರಪ್ಪ, ಬಿ.ಕೆ.ಸಂಗಮೇಶ್ವರ, ಕೆ.ಬಿ.ಅಶೋಕನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಎಸ್.ರುದ್ರೇಗೌಡರು, ಡಿ.ಎಸ್.ಅರುಣ್, ಸಿ.ಎಂ.ಇಬ್ರಾಹಿಂ, ಎಸ್.ಎಲ್.ಭೋಜೇಗೌಡ, ಭಾರತಿಶೆಟ್ಟಿ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಕಾಡಾ ಅಧ್ಯಕ್ಷೆ  ಪವಿತ್ರಾರಾಮಯ್ಯ, ಮೇಯರ್  ಸುನಿತಾ ಅಣ್ಣಪ್ಪ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. 

ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಡಾ|| ಸೆಲ್ವಮಣಿ ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಸೇರಿದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು, ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ.ಮಂಜುನಾಥಸ್ವಾಮಿ ಅವರು ಉಪಸ್ಥಿತರಿರುವರು.
ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಮೋಹನ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ, ಕೋಶಾಧ್ಯಕ್ಷ ಹೆಚ್.ಎನ್.ರಾಘು, ಹಿರಿಯ ಉಪಾಧ್ಯಕ್ಷ ಆರ್.ಪಾಪಣ್ಣ, ತಾಲೂಕು ಘಟಕದ ಅಧ್ಯಕ್ಷರುಗಳಾದ ಜಿ.ಪರಮೇಶ್ವರಪ್ಪ, ಟಿ.ವಿ.ಸತೀಶ್, ಕೃಷ್ಣಮೂರ್ತಿ, ಸಿದ್ಧಬಸಪ್ಪ ಬಿ., ಮಂಜುನಾಥ ಎಸ್. ಮತ್ತು ಮಧುಕೇಶ್ವರ ಎಸ್. ಅವರು ಉಪಸ್ಥಿತರಿರುವರು.
ಈ ಕಾರ್ಯಕ್ರಮದ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭವು ಮಾರ್ಚ್ 27 ರಂದು ಸಂಜೆ 4 ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಅಧ್ಯಕ್ಷತೆಯಲ್ಲಿನ ನಡೆಯಲಿದೆ. ಸಾವಯವ ಕೃಷಿ ಮಿಷನ್ ಅಧ್ಯಕ್ಷ ಎ.ಆನಂದ್, ಸೂಡಾ ಅಧ್ಯಕ್ಷ ಎನ್.ಜೆ.ನಾಗರಾಜ್, ರಾಜ್ಯ ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಹಾಗೂ ಮಹಾನಗರಪಾಲಿಕೆ ಉಪಮೇಯರ್ ಶಂಕರಗನ್ನಿ ಅವರು ಮುಖ್ಯಅತಿಥಿಗಳಾಗಿ ಆಗಮಿಸಿ ವಿಜೇತರಿಗೆ ಬಹುಮಾನ ವಿತರಿಸುವರು. ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ|| ನಾಗೇಂದ್ರ ಎಫ್.ಹೊನ್ನಳ್ಳಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿರುವರು.
ಈ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವ ನೌಕರರು ಮಾರ್ಚ್ 26ರಂದು iಧ್ಯಾಹ್ನ 3 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ಉಪಸ್ಥಿತರಿದ್ದು, ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ನೌಕರರು ಯಾವುದಾದರೂ ಎರಡು ವೈಯಕ್ತಿಕ ಕ್ರೀಡೆ ಹಾಗೂ 1 ಗುಂಪು ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಮಾರ್ಚ್ 26ರಂದು ಸಂಜೆ 4 ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಪಥಸಂಚಲನದಲ್ಲಿ ಕ್ರೀಡಾಳುಗಳು ಶಿಸ್ತಿನಿಂದ ಭಾಗವಹಿಸುವರು. ಸದರಿ ಕ್ರೀಡಾಕೂಟದಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗದಲ್ಲಿ ಕ್ರೀಡೆಗಳನ್ನು ಅದೇ ದಿನ ಆರಂಭಿಸಲಾಗುವುದು. ಕ್ರೀಡಾಪಟುಗಳು ತಮ್ಮ ಕೆ.ಜಿ.ಐ.ಡಿ ಸಂಖ್ಯೆಯನ್ನು ಕಡ್ಡಾಯವಾಗಿ ನೋಂದಾವಣೆ ಸಮಯದಲ್ಲಿ ನೀಡುವಂತೆ ಕಾರ್ಯದರ್ಶಿ ಡಿ.ಟಿ.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ. ‘

By admin

ನಿಮ್ಮದೊಂದು ಉತ್ತರ

error: Content is protected !!