Tunga Taranga | April, 10, Taluku News

ಶಿವಮೊಗ್ಗ :  ಕಾರ್ಗಲ್ ಸಮೀಪದ ಯಲ್ಲಮ್ಮ ಗುಡ್ಡದಲ್ಲಿ ಮಹಿಳೆಯೊಬ್ಬರಿಗೆ ಕೆಎಫ್‌ಡಿ (ಮಂಗನ ಕಾಯಿಲೆ) ಸೋಂಕು ಇರುವುದು ದೃಢಪಟ್ಟಿದ್ದು, ಆತಂಕ ಮನೆಮಾಡಿದೆ.


ಯಲ್ಲಮ್ಮ ಗುಡ್ಡದ ನಿವಾಸಿ ಸೀಮಾ ಬಾನು ಅವರಿಗೆ ತಲೆನೋವು, ಜ್ವರ, ಶೀತ, ನೆಗಡಿ, ಕೆಮ್ಮು, ಕಣ್ಣು ನೋವು ಕಾಣಿಸಿಕೊಂಡಿತ್ತು.


ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಪರೀಕ್ಷೆ ಮಾಡಿದಾಗ ಕೆಎಫ್‌ಡಿ ಸೋಂಕು ದೃಢಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!