Tungataranga News, April,15, 2022 | Shimoga news
ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆಯೇರಿಕೆ ವಿರೋಧಿಸಿ ಏ.18 ರಂದು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಎಎಪಿ ಪಕ್ಷದ ಜಿಲ್ಲಾಧ್ಯಕ್ಷ ಮನೋಹರ ಗೌಡ ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬೆಲೆ ಏರಿಕೆ ನಿಯಂತ್ರಣ ಮಾಡಲು ಸಂಪೂರ್ಣ ವಿಫಲವಾಗಿವೆ. ರಾಜ್ಯದಲ್ಲಿ ಒಂದಲ್ಲ ಒಂದು ರೀತಿಯ ಕೋಮು ಸಂಘರ್ಷ ನಡೆಯುತ್ತಲೇ ಇದ್ದು, ಅದರಲ್ಲಿಯೇ ಸರ್ಕಾರ ನಿರತವಾಗಿದೆ. ಇದರಿಂದಾಗಿ ಬೆಲೆಏರಿಕೆಯಂತಹ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ನಿತ್ಯವೂ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇಂಧನ ಬೆಲೆ ಏರಿಕೆಯಿಂದಾಗಿ ಎಲ್ಲಾ ವಸ್ತುಗಳ ಬೆಲೆ ಹೆಚ್ಚಳವಾಗಿದೆ.ಆದ್ದರಿಂದ ಜನರಲ್ಲಿ ಸರ್ವಧರ್ಮ ಸಮಾನತೆಯ ಜೊತೆಗೆ ಬೆಲೆ ಏರಿಕೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಏಪ್ರಿಲ್ 18 ರಂದು ನಗರದ ಖಾಸಗೀ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಗೃತಿ ಜಾಥಾ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕಿರಣ್‌ಕುಮಾರ್, ಅಮೃತ್, ಗಣೇಶ್, ನಜೀರ್ ಅಹಮದ್, ರಮೇಶ್, ಹರ್ಷಿತಾ ಮತ್ತಿತರರು ಇದ್ದರು.