ಶಿವಮೊಗ್ಗ, ಏ.17:
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್. ಈಶ್ವರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದ ವಿವಿಧ ಮಠಾಧೀಶರು ಸಮಾಧಾನ ಮಾಡಿ ಆಶೀರ್ವದಿಸಿದ್ದಾರೆ.
ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ಚೆನ್ನಯ್ಯ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನದ ಶ್ರೀಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಚಿತ್ರದುರ್ಗ ಮಡಿವಾಳ ಗುರುಪೀಠದ ಶ್ರೀ ಮಡಿವಾಳ ಮಾಚಿದೇವ ಸ್ವಾಮೀಜಿ, ಶಿವಮೊಗ್ಗ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿ, ಚಿತ್ರದುರ್ಗ ಮೇದಾರ ಗುರುಪೀಠದ ಶ್ರೀ ಇಮ್ಮಡಿ ಕೇತೇಶ್ವರ ಸ್ವಾಮೀಜಿ ಅವರು ಈಶ್ವರಪ್ಪ ನಿವಾಸಕ್ಕೆ ಆಗಮಿಸಿ ಆಶೀರ್ವದಿಸಿದರು.
ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ಈಶ್ವರಪ್ಪ ಅವರು, ರಾಜ್ಯದ ಜನ ಎಷ್ಟೊಂದು ಪ್ರೀತಿ, ವಿಶ್ವಾಸ ತೋರಿದ್ದಾರೆ. ಈ ಪ್ರಕರಣದಲ್ಲಿ ಆರೋಪಮುಕ್ತನಾಗಿ ಬರಲು ರಾಜೀನಾಮೆ ನೀಡಿದ್ದೇನೆ ಎಂದರು. ಶ್ರೀಗಳ ಆಗಮನಕ್ಕೆ ಈಶ್ವರಪ್ಪ ಹರ್ಷ ವ್ಯಕ್ತಪಡಿಸಿದರು.
ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದಲ್ಲಿ ಬಹು ವಿಜೃಂಭಣೆಯ ಶ್ರೀದೇವರ ರಥಾರೋಹಣ, ಬ್ರಹ್ಮ ರಥೋತ್ಸವ ಕಾರ್ಯಕ್ರಮದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳು ಕ್ಷೇತ್ರದ ಶಾಸಕರಾದ ಬಿ. ಎಸ್ ಯಡಿಯೂರಪ್ಪ ಹಾಗೂ ಸಂಸದರಾದ ಬಿ. ವೈ ರಾಘವೇಂದ್ರ ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಅವರು ಕುಟುಂಬ ಸಮೇತವಾಗಿ ಸ್ವಾಮಿಯ ದರ್ಶನವನ್ನು ಮಾಡಿ, ವಿಶೇಷ ಪೂಜೆಯನ್ನು ಸಲ್ಲಿಸಿದರು.