ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ನಿರ್ದೋಷಿಯಾಗಿ ಹೊರಬರುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೋವಿ ಭವನದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರನ್ನು ಭೇಟಿಯಾದ ನಂತರ ಅವರು ಮಾತನಾಡಿದರು.

ಸಂತೋಷ್ ಪಾಟೀಲ್ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಇದರಲ್ಲಿ ನಾನು ಒಂದೇ ಒಂದು ಪರ್ಸೆಂಟ್ ಮಾಡಿದ್ದರೂ ನನಗೆ ಶಿಕ್ಷೆಯಾಗಲಿ ಎಂದರು.
ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲ ಆಯಾಮ ದಲ್ಲೂ ತನಿಖೆಯಾಗುತ್ತಿದೆ. ಇದರಲ್ಲಿ ನಾನು ನಿರ್ದೋ ಷಿಯಾಗಿ ಹೊರ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ಅವರು ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು ಕೊಡುತ್ತಿದ್ದಾರೆ. ಜಮ್ಮು ಕಾಶ್ಮೀರದಲ್ಲೂ ಗ್ರಾಮೀಣಾಭಿ ವೃದ್ಧಿ ಹಿನ್ನಲೆಯಲ್ಲಿಯೇ ಪ್ರಯಾಣ ಬೆಳೆಸಿದ್ದಾರೆ. ಗ್ರಾಮೀಣ ಪ್ರದೇಶದ ಸಮಸ್ಯೆಗಳು ಬಗೆಹರಿಸಲು ಹಲವು ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿವೆ. ಮುಖ್ಯವಾಗಿ ಕೇಂದ್ರದಿಂದ ಜಲಜೀವನ್ ಮಿಷನ್, ನರೇಗಾ, ರಸ್ತೆ ಅಭಿವೃದ್ಧಿ, ಉದ್ಯೋಗ, ಶೌಚಾ ಲಯ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ. ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಪ್ರತಿ ಮನೆಗೂ ನಲ್ಲಿಯ ಮೂಲಕ ನೀರು ಸರಬರಾಜು ಮಾಡಲಾಗವುದು ಎಂದರು.