ಕರ್ನಾಟಕ ವಾರ್ತೆ ಸುದ್ದಿ

ನಾಳೆ ಭದ್ರಾ ನೀರು ಬಿಡುಗಡೆ ಸಮಯ ನಿಗಧಿ


ಭದ್ರಾ ಜಲಾಶಯ ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯ 2021-22ರ ಬೇಸಿಗೆ ಬೆಳೆಗಾಗಿ ಭದ್ರಾ ಅಚ್ಚುಕಟ್ಟು ನಾಲೆಗಳಲ್ಲಿ ಹರಿಸಲಾಗುತ್ತಿರುವ ನೀರನ್ನು ನಿಲ್ಲಿಸುವ ಕುರಿತು ತೀರ್ಮಾನ ಕೈಗೊಳ್ಳಲು ದಿ: 28/04/2022 ರಂದು ಬೆಳಗ್ಗೆ 11.00ಕ್ಕೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಮಲವಗೊಪ್ಪ ಶಿವಮೊಗ್ಗ ಇಲ್ಲಿ 80ನೇ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸಭೆಯನ್ನು ಆಯೋಜಿಸಲಾಗಿದೆ ಎಂದು ಬಿ.ಆರ್. ಪ್ರಾಜೇಕ್ಟ್, ಕನೀನಿನಿ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸ್ಮಶಾನದ ಅವಶ್ಯವಿರುವ ಗ್ರಾಮಗಳಿಂದ ಅರ್ಜಿ ಆಹ್ವಾನ


ಜಿಲ್ಲೆಯ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಸರ್ಕಾರದ ಜಮೀನು ಲಭ್ಯವಿರುವ ಕಡೆ 2 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಪ್ರತ್ಯಾಯೋಜಿಸಲಾಗಿದ್ದು, ಸ್ಮಶಾನದ ಅವಶ್ಯಕತೆವಿರುವ ಗ್ರಾಮದ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಕಂದಾಯ ಇಲಾಖೆಯು ತಿಳಿಸಿದೆ.
ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಅಂತಹ ಅನರ್ಹ ಅರ್ಜಿಗಳನ್ನು ವಜಾಗೊಳಿಸಿ ಜಮೀನನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸಲಾಗುವುದು ಹಾಗೂ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಮಾರ್ಗಸೂಚಿಯ ಪ್ರಕಾರ ಮೌಲ್ಯದ ಮೂರು ಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಹಾಗೂ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳು, ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರ್‍ರವರಿಗೆ ದೂರು ನೀಡುವಂತೆ ಶಿವಮೊಗ್ಗ ತಾಲೂಕು ತಹಶೀಲ್ದಾರ್‍ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಏ.28ರಂದು ಶಿವಮೊಗ್ಗದಲ್ಲಿ ಕರೆಂಟ್ ಕಟ್ ಎಲ್ಲಿ ನೋಡಿ

ಎಂ.ಆರ್.ಎಸ್. ವಿದ್ಯುತ್ ವಿತರಣ ಕೇಂದ್ರದ ವ್ಯಾಪ್ತಿಯಲ್ಲಿ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆ.ವಿ. ಯು.ಜಿ. ಕೇಬಲ್ ಚಾರ್ಜಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 28/04/2022 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರ ವರೆಗೆ ದುರ್ಗಿಗುಡಿ, ಪಾರ್ಕ್‍ಬಡಾವಣೆ, ಗೋಪಿಸರ್ಕಲ್, ತಿಲಕ್‍ನಗರ, ರಾಘವೇಂದ್ರ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದ್ದು, ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ.
ಆದ್ದರಿಂದ ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು ಹಾಗೂ ದನಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವುದು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ವಹಿಸಲು ತು.ಮೇ.ಯೋ.ವಿ. ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಅಲ್ಪಸಂಖ್ಯಾತರ ಅಭಿವೃದ್ದಿ ನಿಮಗದ ಲೋಗೋ ಕೊಡಿ, ಪ್ರೈಜ್ ತಗೊಳ್ಳಿ


ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಲೋಗೋ ಹಳೆಯದಾಗಿದ್ದು, ಹೊಸ ಲೋಗೋವನ್ನು ರಚಿಸಲು ಸೃಜನಶೀಲ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ತಮ್ಮ ಸ್ವವಿವರಗಳೊಂದಿಗೆ ಲೋಗೋವನ್ನು ಎ4 ಡ್ರಾಯಿಂಗ್ ಪೇಪರ್‍ನಲ್ಲಿ ಬರೆದು ಬಣ್ಣಗಳಲ್ಲಿ ಚಿತ್ರಿಸಿ ಸೀಲ್ ಮಾಡಿದ ಕವರ್‍ನಲ್ಲಿ ಹಾಗೂ ಡಿಜಿಟಲ್ ಮೋಡ್ ಮೂಲಕ ಕಳುಹಿಸುವವರು ಕಾಂಪ್ಯಾಕ್ಟ್ ಡಿಸ್ಕ್ ಮೂಲಕ ದಿ: 16/05/2022 ರೊಳಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, 12ನೇ ಮಹಡಿ, ವಿಶ್ವೇಶ್ವರಯ್ಯ ಕೇಂದ್ರ, ಡಾ|| ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು -560001 ಇಲ್ಲಿಗೆ ಸಲ್ಲಿಸುವುದು.
ಸ್ಪರ್ಧೆಯಲ್ಲಿ ಗೆಲ್ಲುವ ಅತ್ಯುತ್ತಮವಾಗಿರುವ ವಿನ್ಯಾಸಕ್ಕೆ ರೂ. 10,000/- ಗಳ ಬಹುಮಾನ ನೀಡಲಾಗುವುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸ್ಪರ್ಧೆಯ ನಿಯಮಗಳು ಮತ್ತು ಷರತ್ತುಗಳಿಗೆ ನಿಗಮದ ವೆಬ್‍ಸೈಟ್ www.kmdc.karnataka.gov.in ರಿಂದ ಡೌನ್‍ಲೋಡ್ ಮಾಡಿಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: .08182-228262ನ್ನು ಸಂಪರ್ಕಿಸುವುದು.

By admin

ನಿಮ್ಮದೊಂದು ಉತ್ತರ

You missed

error: Content is protected !!