ಶಿವಮೊಗ್ಗ, ಏ.೩೦:
ಮನುಷ್ಯನ ಅಗತ್ಯಗಳಿಗೆ ಎಲ್ಲವನ್ನೂ ನೀಡುವ, ಅವರ ಆರೋಗ್ಯವನ್ನು ವೃದ್ಧಿ ಸುವ ಹಾಗೂ ರೈತರ ಆರ್ಥಿಕತೆಯನ್ನು ಅಭಿವೃದ್ಧಿಗೊಳಿಸುವ ಗೋಮಾತೆ ಧನ್ಯಳು, ಮಾನ್ಯಳು ಎಂದು ನಿಕಟಪೂರ್ವ ಮುಖ್ಯ ಮಂತ್ರಿ ಹಾಗೂ ಶಾಸಕ ಬಿ.ಎಸ್.ಯಡಿ ಯೂರಪ್ಪ ಅವರು ಹೇಳಿದರು.


ಅವರು ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಜಿಲ್ಲಾ ಪಂಚಾಯತ್ ಶಿವಮೊಗ್ಗ, ಶಿವಮೊಗ್ಗ ಹಾಲು ಒಕ್ಕೂಟ ಮತ್ತು ಪಶುವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದೊಂದಿಗೆ ಸರ್ಕಾರಿ ನೌಕರರ ಸಭಾಭವನದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಏರ್ಪಡಿ ಸಲಾಗಿದ್ದ ವಿಶ್ವ ಪಶುವೈದ್ಯಕೀಯ ದಿನಾ ಚರಣೆ ಹಾಗೂ ಜಿಲ್ಲೆಯ ಪಶುವೈದ್ಯರಿಗೆ ಜಿಲ್ಲಾ ಮಟ್ಟದ ತಾಂತ್ರಿಕ ವಿಚಾರ ಸಂಕಿರ ಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಉಪಕಸುಬನ್ನಾಗಿಸಿಕೊಂಡಿರುವ ಹಾಗೂ ರೈತರು ಅವಲಂಬಿಸಿರುವ ಹೈನುಗಾರಿಕೆ, ಕುರಿ-ಮೇಕೆ-ಕೋಳಿ ಸಾಕಾಣಿಕೆಗೆ ಹಗಲಿರುಳೆನ್ನದೆ ಶ್ರಮಿಸು ತ್ತಿರುವ ಪಶುವೈದ್ಯರ ಪಾತ್ರ ಪ್ರಮುಖವಾ ದುದ್ದಾಗಿದೆ ಎಂದ ಅವರು, ತಾವು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹಾಲು ಉತ್ಪಾದಕರಿಗೆ ಪ್ರತಿ ಲೀ., ಹಾಲಿಗೆ ರೂ.೨/- ಪ್ರೋತ್ಸಾಹಧನವನ್ನು ನೀಡ ಲಾಗುತ್ತಿತ್ತು. ಪ್ರಸ್ತುತ ಈ ಪ್ರೋತ್ಸಾಹ ಧನವನ್ನು ರೂ.೫/-ಕ್ಕೆ ಹೆಚ್ಚಿಸಲಾಗಿದೆ. ಭಾರತದ ಜಿಡಿಪಿ.ಗೆ ಕೃಷಿಯಿಂದ ಶೇ.೧೬ರಷ್ಟು ಕೊಡುಗೆ ನೀಡಲಾಗುತ್ತಿದೆ. ಇದರಲ್ಲಿ ಶೇ.೨೫ರಷ್ಟು ಪಶುಪಾಲಕರ ಪಾತ್ರವಿದೆ ಎಂದವರು ನುಡಿದರು.


೨೦೦೬ರಲ್ಲಿ ಜಿಲ್ಲೆಯಲ್ಲಿ ಪಶುವೈದ್ಯ ಕೀಯ ಕಾಲೇಜನ್ನು ಪ್ರಾರಂಭಿಸಿ, ಪಶುವೈ ದ್ಯಕೀಯ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ. ಇದರಿಂದಾಗಿ ರೈತರಿಗೆ ನೆರವು ದೊರೆಯಲಿದೆ. ದೇಶವು ಜಾನು ವಾರು ಸಂಖ್ಯೆಯಲ್ಲಿ ಮತ್ತು ಹಾಲು ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ರಾಜ್ಯದಲ್ಲಿ ದಿನಂಪ್ರತಿ ೧೮ ಬಿಲಿಯನ್ ಲೀ. ಹಾಲು ಉತ್ಪಾದನೆಯಾಗುತ್ತಿದೆ. ಇದರಿಂದಾಗಿ ಕರ್ನಾಟಕ ರಾಜ್ಯ ಉತ್ಪಾದನೆಯಲ್ಲಿ ೮ನೇ ಸ್ಥಾನದಲ್ಲಿರುವುದು ಹರ್ಷದ ಸಂಗತಿ ಎಂದರು.


ಪಶುಪಾಲಕರ ಅನುಕೂಲಕ್ಕಾಗಿ ಪಶುಗಳಿಗೆ ಅಂಬುಲೆನ್ಸ್ ಪ್ರಾರಂಭಿಸಿದೆ. ಗೋಸಂರಕ್ಷಣಾ ಕಾಯ್ದೆ-೨೦೨೦ನ್ನು ಜಾರಿಗೊಳಿಸಲಾಗಿದೆ. ಇದರಿಂದಾಗಿ ವಯ ಸ್ಸಾದ ಜಾನುವಾರುಗಳನ್ನು ಸಂರಕ್ಷಿಸಲು ಜಿಲ್ಲೆಗೊಂದರಂತೆ ಗೋಶಾಲೆ ಪ್ರಾರಂಭಿ ಸಲು ಚಿಂತನೆ ನಡೆಸಲಾಗಿದ್ದು, ಕಾರ್ಯ ಪ್ರಗತಿಯಲ್ಲಿದೆ. ಮೈಸೂರಿನ ಪಿಂಜಾರಿ ಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಯೋಜನೆಯಡಿಯಲ್ಲಿ ಗೋಶಾ ಲೆಗಳ ಪ್ರತಿ ಗೋವಿಗೆ ನಿರ್ವಹಣಾ ವೆಚ್ಚ ವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಗೋವುಗಳ ಸೇವೆ ಅವಶ್ಯ ವಿರುವಂತೆಯೇ ಪಶುವೈದ್ಯರ ಬೇಡಿಕೆಯೂ ಹೆಚ್ಚಿದೆ. ಗೋವುಗಳ ಸೇವೆ ಮಾಡುವ ಪಶುವೈದ್ಯರ ಸೇವೆ ಅಭಿನಂದನೀಯ. ಕಾಲಕಾಕ್ಕೆ ಬದಲಾಗುತ್ತಿರುವ ವ್ಯವಸ್ಥೆಗೆ ಪೂರಕವಾಗಿ ಅತ್ಯಾಧುನಿಕ ತಂತ್ರಜ್ಞಾನ ಗಳನ್ನು ಅಳವಡಿಸಿಕೊಂಡು ತಮ್ಮ ಜವಾ ಬ್ದಾರಿಯರಿತು ಕಾರ್ಯನಿರ್ವಹಿಸು ವಂತೆ ಪಶು ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.
ಕಾರ್ಯಾಗಾರದಲ್ಲಿ ಪಶು ಸೇವೆಗೆ ಸಂಬಂಧಿಸಿದಂತೆ ಆಹ್ವಾನಿತ ತಜ್ಞರಿಂದ ತಾಂತ್ರಿಕ ವಿಚಾರ ಸಂಕಿರಣ ಹಾಗೂ ಗೋಷ್ಠಿಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಆರ್.ರುದ್ರೇಗೌಡರು, ಮೇಯರ್ ಸುನಿತಾ ಅಣ್ಣಪ್ಪ, ನೌಕರರ ಸಂಘದ ರಾಜ್ಯಾ ಧ್ಯಕ್ಷ ಸಿ.ಎಸ್.ಷಡಾಕ್ಷರಿ, ಡಾ|| ಶಿವಯೋಗಿ ಬಿ.ಯಲಿ ಅವರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!