ಶಿವಮೊಗ್ಗ, ಮೇ.20:
ಜಿಲ್ಲೆಯಾದ್ಯಂತ ಮಳೆ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.20ರ ಇಂದಿನ ಶುಕ್ರವಾರ ಸಹ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.
ಮೇ.19ರಂದು ರಜೆ ಘೋಷಣೆ ವಿಷಯದಲ್ಲಿ ಆದ ಯಡವಟ್ಟನ್ನು ಗಮನಿಸಿ ಜಿಲ್ಲಾಧಿಕಾರಿಗಳೇ ಇಂದಿನ ಜಿಲ್ಲೆಯ ಪರಿಸ್ಥಿತಿ ಅವಲೋಕಿಸಿ ರಜೆ ಘೋಷಿಸಿದ್ದಾರೆ.
ಶಿವಮೊಗ್ಗ, ದಾವಣಗೆರೆ ಹಾಗೂ ಉಡುಪಿಯಲ್ಲಿ ಈಗ ಜಿಲ್ಲಾದ್ಯಂತ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳೇ ಮುಂದೆ ನಿಂತು ಆದೇಶಿದ್ದಾರೆ.