ಶಿವಮೊಗ್ಗ, ಮೇ.೨೨:
ಇತ್ತೀಚೆಗೆ ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯ ಸ್ತಗೊಂಡಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಳ್ಳಬಹುದಾದ ಅಗತ್ಯ ಕ್ರಮಗಳ ಬಗ್ಗೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ರಾಜ್ಯ ಸರ್ಕಾರದ ಗೃಹಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು.


ಅವರು ಇಂದು ನಗರದಲ್ಲಿ ಮಳೆಹಾನಿ ಗೊಳಗಾದ ಬಾಪೂಜಿನಗರ, ವಿದ್ಯಾನಗರ, ಗಣಪತಿ ಲೇಔಟ್ ಮುಂತಾದ ಪ್ರದೇಶಗಳಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿ ಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು, ಸಾಧ್ಯವಿ ರುವ ಎಲ್ಲಾ ರೀತಿಯ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.


ಮುಂಗಾರು ಆರಂಭವಾಗುವ ಮೊದಲೆ ಪಾಲಿಕೆ ವತಿಯಿಂದ ನಗರದ ರಾಜಾಕಾ ಲುವೆ, ಮಳೆನೀರು ಚರಂಡಿಗಳನ್ನು ಸ್ವಚ್ಚ ಮಾಡಿಕೊಳ್ಳಲು ಸಿದ್ಧತೆ ಕೈಗೊಳ್ಳಲಾಗಿತ್ತು. ಆದರೆ ಅವಧಿಗೂ ಮುನ್ನವೇ ಅನಿರೀಕ್ಷಿತ ವಾಗಿ ಬಂದ ಭಾರೀ ಮಳೆಯಿಂದಾಗಿ ನಗರದಲ್ಲಿ 8-9ಮನೆಗಳು ಹಾನಿಗೊಳಗಾಗಿ ರುವುದಲ್ಲದೇ ಅನೇಕ ಮನೆಗಳ ಗೋಡೆಗಳು ಮಳೆಯಿಂದ ಶಿಥಿಲಾವಸ್ಥೆ ತಲುಪಿ ಹಾನಿಯಾಗುವ ಸಂಭವ ಇರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಇನ್ನೂ ಹಲವೆಡೆ ರಸ್ತೆ, ಚಾನಲ್ ಏರಿಗಳು ಕೊಚ್ಚಿ ಹೋಗಿರುವ ಬಗ್ಗೆಯೂ ಮಾಹಿತಿ ಇದೆ. ಇವುಗಳನ್ನು ಸರಿಪಡಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.


ಈ ಸಂಬಂಧ ಈಗಾಗಲೇ ಮಾಜಿ ಸಚಿವರ ಕೆ.ಎಸ್.ಈಶ್ವರಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ತುರ್ತು ಪರಿಹಾರ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದ ಅವರು, ಪರಿಶೀಲನೆಯ ನಂತರ ಕ್ರೋಢೀಕೃತ ವರದಿ ಪಡೆದು, ಪರಿಹಾರ ಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.


ತೀರ್ಥಹಳ್ಳಿ ಸಮೀಪದ ತೂದೂರು ಗ್ರಾಮದಲ್ಲಿ ಶಂಕ್ರಪ್ಪ ಎಂಬ ವ್ಯಕ್ತಿ ಸಾವಿಗೀಡಾಗಿದ್ದು, ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.


ಅಂತೆಯೇ ಜಿಲ್ಲೆಯಾದ್ಯಂತ ಸುಮಾರು 1800 ಹೆಕ್ಟೇರ್ ತೋಟಗಾರಿಕೆ ಮತ್ತು ಕೃಷಿಬೆಳೆ ಹಾನಿಯಾಗಿರುವ ವರದಿ ಇದೆ. ಸುಮಾರು ೯ಮನೆಗಳು ಬಿದ್ದಿರುವ, ಕೆಲವು ಚಾನಲ್ ಹಾಗೂ ಕೆರೆಗಳು ಒಡೆದು ನೀರು ಹರಿದು ಹಾನಿಯಾಗಿರುವ ಬಗ್ಗೆಯೂ ಮಾಹಿತಿ ಇದ್ದು, ಅಧಿಕಾರಿಗಳ ವರದಿಯನ್ನಾಧರಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.


ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ, ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಚನ್ನಬಸಪ್ಪ, ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತಿತರರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!