ಬೆಂಗಳೂರು,
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ತೆರಿಗೆ ಕಡಿತಗೊಳಿಸಿದ್ದು, ರಾಜ್ಯದಲ್ಲಿಯೂ ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡಿದ ಬೆನ್ನಲ್ಲೇ ಕೇರಳ, ಒಡಿಶಾ, ಮಹಾರಾಷ್ಟ್ರದಲ್ಲಿ ತೆರಿಗೆ ಇಳಿಕೆ ಮಾಡಲಾಗಿದೆ.


ರಾಜ್ಯದಲ್ಲಿಯೂ ಸುಂಕ ಇಳಿಕೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯನ್ನು 9.5 ರೂ., ಡೀಸೆಲ್ ಬೆಲೆಯನ್ನು 8 ರೂ.ನಷ್ಟು ಕಡಿಮೆ ಮಾಡಿದ್ದು, ಜನಸಾಮಾನ್ಯರಿಗೆ ಅನುಕೂಲವಾಗಿದೆ. ಇದೇ ರೀತಿ ರಾಜ್ಯದಲ್ಲಿ ತೆರಿಗೆ ಕಡಿಮೆ ಮಾಡಿ ಹೊರೆ ಇಳಿಸಬೇಕೆಂಬ ಅಭಿಪ್ರಾಯ ಕೇಳಿಬಂದಿದೆ.


ಇದಕ್ಕೆ ಪೂರಕವಾಗಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತೆರಿಗೆ ಕಡಿತ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರ ತೈಲ ಬೆಲೆ ಕಡಿಮೆ ಮಾಡಿದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೂಡ ತೆರಿಗೆ ಕಡಿತಗೊಳಿಸಿದ್ದು, ಈ ಬಾರಿ ಕೂಡ ಪೆಟ್ರೋಲ್-ಡೀಸೆಲ್ ತೆರಿಗೆ ಕಡಿತಗೊಳಿಸುವ ಸಾಧ್ಯತೆ ಇದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ದಾವೋಸ್ ಪ್ರವಾಸದಿಂದ ವಾಪಸಾದ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

By admin

ನಿಮ್ಮದೊಂದು ಉತ್ತರ

error: Content is protected !!