ಶಿವಮೊಗ್ಗ 2022-23 ನೇ ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಜಿಲ್ಲೆಯಲ್ಲಿ ಗುರುತಿಸಲಾಗಿರುವ ಪ್ರತಿಷ್ಟಿತ ಶಾಲೆಗಳ 6 ನೇ ತರಗತಿಗೆ ಅರ್ಹತಾ ಪರೀಕ್ಷೆ ಮೂಲಕ ದಾಖಲಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.


ಶೇ60 ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಪ್ರತಿಭಾವಂತ ಪರಿಶಿಷ್ಟ ಪಂಗಡದ 18 ಸ್ಥಾನಗಳಿಗೆ 6 ನೇ ತರಗತಿಗೆ ದಾಖಲಿಸಿಕೊಳ್ಳಲು ಮೇ 30 ರಿಂದ ಜೂನ್ ೦೭ ರವರೆಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರೇಡ್-1 &2 ) ಇವರ ಕಚೇರಿಉಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ಜೂನ್ 07 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂ: 08182-279222 .9482762350 ಸಂಪರ್ಕಿಸುವಂತೆ ತಿಳಿಸಿದೆ.

By admin

ನಿಮ್ಮದೊಂದು ಉತ್ತರ

error: Content is protected !!