ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ
ಶಿವಮೊಗ್ಗ ಮೇ 30:
ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ದೇಶದ ಪ್ರಧಾನಮಂತ್ರಿಗಳು ಮೇ 31 ರಂದು ಬೆಳಿಗ್ಗೆ 11 ಗಂಟೆಗೆ ಹಿಮಾಚಲ ಪ್ರದೇಶದ ಶಿಮ್ಲಾದಿಂದ ಕೇಂದ್ರ ಸರ್ಕಾರದ ಒಂಭತ್ತು ಸಚಿವಾಲಯದ ಸುಮಾರು 16 ಯೋಜನೆ-ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ಸರ್ಕಾರದ ಈ ಎಲ್ಲ ಜನಪರ ಯೋಜನೆಗಳು ದೇಶದ ಬಡ ಜನರ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಹಿನ್ನೆಲೆಯಲ್ಲಿ ವಿಡಿಯೋ ಸಂವಾದ ಕಾರ್ಯಕ್ರಮಕ್ಕೆ “ಗರೀಬ್ ಕಲ್ಯಾಣ್ ಸಮ್ಮೇಳನ” ಎಂದು ಹೆಸರಿಸಲಾಗಿದೆ. ಈ ಯೋಜನೆಗಳು ನಾಗರಿಕರಿಗೆ ಸುಲಭ ಜೀವನ ನಡೆಸಲು ಹೇಗೆ ಕಾರಣವಾಗಿವೆ ಎಂಬುದನ್ನು ಅರ್ಥಮಾಡಿಕೊಳ್ಳುವುದರ ಜೊತೆಗೆ ಇದರ ಒಮ್ಮುಖ ಮತ್ತು ಶುದ್ಧತ್ವದ ಸಾಧ್ಯತೆಯನ್ನು ಅನ್ವೇಷಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಹಾಗೂ ಇದರಿಂದ 2047 ರಲ್ಲಿ ಭಾರತದ ಸ್ವಾತಂತ್ರ್ಯ ಶತಮಾನೋತ್ಸವ ಸಂದರ್ಭದಲ್ಲಿ ದೇಶದ ಪ್ರಗತಿಗೆ ನಾಗರೀಕರ ಆಕಾಂಕ್ಷೆಯನ್ನು ತಿಳಿಯಲು ಸಹಕಾರಿಯಾಗುತ್ತದೆ.
ಗರೀಬ್ ಕಲ್ಯಾಣ ಸಮ್ಮೇಳನ ದೇಶದ ಎಲ್ಲಾ ಜಿಲ್ಲೆಗಳನ್ನೊಳಗೊಂಡ ಅತಿದೊಡ್ಡ ರಾಷ್ಟ್ರೀಯ ಸಂವಾದಗಳಲ್ಲಿ ಒಂದಾಗಿದೆ. ದೇಶದ ಆಯ್ದ ಜಿಲ್ಲೆಗಳ ಕೆಲ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿಗಳು ಯೋಜನೆಗಳಾದ ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ & ನಗರ), ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪೋಷಣ್ ಅಭಿಯಾನ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ಸ್ವಚ್ಛ ಭಾರತ್ ಮಿಷನ್, ಜಲ ಜೀವನ್ ಮಿಷನ್ ಮತ್ತು ಅಮೃತ್ ಯೋಜನೆ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ, ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ, ಪ್ರಧಾನ ಮಂತ್ರಿ ಮುದ್ರಾ ಯೋಜನೆಗಳ ಕುರಿತು ಸಂವಾದ ನಡೆಸಿ ಫಲಾನುಭವಿಗಳ ಜೀವನೋಪಾಯ ಮತ್ತು ಆರ್ಥಿಕ ಒಳಗೊಳ್ಳುವಿಕೆ ಇತ್ಯಾದಿಗಳ ಮೇಲೆ ಯೋಜನೆ ಮತ್ತು ಕಾರ್ಯಕ್ರಮಗಳು ಹೇಗೆ ಪ್ರಭಾವ ಬೀರಿವೆ ಎಂಬುದನ್ನು ತಿಳಿಯಲಿದ್ದಾರೆ.
ಇಂತಹ ಐತಿಹಾಸಿಕ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯೂ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಕಿಸಾನ್ ಸಮ್ಮಾನ್ ನಿಧಿಯ 11 ನೇ ಕಂತನ್ನು ಸಹ ಬಿಡುಗಡೆ ಮಾಡಲಿದ್ದಾರೆ.
ಈ ಕಾರ್ಯಕ್ರಮವನ್ನು ದೂರದರ್ಶನದ ಮೂಲಕ ರಾಷ್ಟ್ರೀಯ ಮತ್ತು ಪ್ರಾದೇಶಿಕ ಚಾನೆಲ್‍ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಒಥಿಉov ಮೂಲಕ ವೆಬ್‍ಕಾಸ್ಟ್ ಸಹ ಮಾಡಲಾಗುತ್ತಿದ್ದು, ಜನರು ಇದರ ವೀಕ್ಷಣೆಗೆ ನೋಂದಾಯಿಸಿಕೊಳ್ಳಬೇಕು. ಇದಲ್ಲದೆ ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್, ಫೇಸ್‍ಬುಕ್, ಟ್ವಿಟರ್, ಇನ್‍ಸ್ಟಾಗ್ರಾಂ ಇತ್ಯಾದಿಗಳ ಮೂಲಕವೂ ವೀಕ್ಷಿಸಬಹುದಾಗಿದೆ.
ಈ ಸಂವಾದವು ಜನರ ಜೀವನ ಸುಲಭಗೊಳಿಸುವುದಕ್ಕೆ ಕಾರಣವಾಗುವ ಬಡವರ ಪರವಾದ ಯೋಜನೆಗಳ ಜನ-ಕೇಂದ್ರಿತ ವಿಧಾನವನ್ನು ಮಾತ್ರ ಎತ್ತಿ ತೋರಿಸುವುದಲ್ಲದೆ, ಜನರ ಆಕಾಂಕ್ಷೆಗಳನ್ನು ಸಹ ತಿಳಿದುಕೊಳ್ಳುವುದು ಮತ್ತು ರಾಷ್ಟ್ರದ ಪ್ರಗತಿಯ ಹಾದಿಯಲ್ಲಿ ಯಾರೂ ಹಿಂದುಳಿದಿಲ್ಲ ಎಂಬುದನ್ನು ಖಚಿತಪಡಿಸುತ್ತದೆ.
ಜಿ.ಪಂ ಸಭಾಂಣದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ
ಮೇ 31 ರ ನಾಳೆ ಬೆಳಿಗ್ಗೆ 9.30 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಪ್ರಧಾನಮಂತ್ರಿಗಳ ಸಂವಾದದ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಿದ್ದು, ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಂದು ಬೆಳಿಗ್ಗೆ 9.30 ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಸದರಿ ಫಲಾನುಭಿಗಳೊಂದಿಗೆ ಸಂವಾದ ನಡೆಸುವುದರ ಜೊತೆಗೆ ಮಾನ್ಯ ಪ್ರಧಾನ ಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ದೇಶಾದ್ಯಂತ ಫಲಾನುಭವಿಗಳೊಂದಿಗೆ ನಡೆಸುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಜಿಲ್ಲಾ ಪಂಚಾಯತ್ ಸಿಇಓ ಎಂ.ಎಲ್.ವೈಶಾಲಿ ತಿಳಿಸಿದ್ದಾರೆ.