ಶಿವಮೊಗ್ಗ : ಮೇ 31:
ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯನ್ನು ತಂಬಾಕು ಮುಕ್ತವನ್ನಾಗಿಸಲು ಸಂಕಲ್ಪ ಮಾಡಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.
ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಜಿಲ್ಲಾ ನ್ಯಾಯಾಲಯದ ಆವರಣದಿಂದ ಏರ್ಪಡಿಸಲಾಗಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ತಂಬಾಕು ಮತ್ತು ತಂಬಾಕಿನ ಉಪಉತ್ಪನ್ನಗಳ ಬಳಕೆಯಿಂದ ಅನೇಕ ರೀತಿಯ ಕ್ಯಾನ್ಸರ್‌ಕಾರಕ ಕಾಯಿಲೆಗಳು ಹಬ್ಬುತ್ತಿದ್ದು, ಅನೇಕ ಕುಟುಂಬಗಳ ಮುಖ್ಯಸ್ಥರೇ ಸಾವನ್ನಪ್ಪುತ್ತಿದ್ದಾರೆ. ಇದರಿಂದಾಗಿ ಅನೇಕ ಕುಟುಂಬಗಳ ನಿರ್ವಹಣೆ ದಯನೀಯವಾಗಲಿದೆ. ಆದ್ದರಿಂದ ತಂಬಾಕು ನಿಯಂತ್ರಣದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದರು.
ರೈತಸಂಘದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ, ಸಮಗ್ರ ಮಾಹಿತಿ ಇಲ್ಲಿದೆ ನೋಡಿ https://tungataranga.com/?p=11542
ಶಿವಮೊಗ್ಗದ ಪ್ರಮುಖ ಸುದ್ದಿ ಮಾಹಿತಿಗೆ tungataranga.com ಹಾಗೂ ಪತ್ರಿಕೆಗೆ tungataranga.blogspot.com ಗೆ ಕ್ಲಿಕ್ ಮಾಡಿ.
ನಮ್ಮ ಹಾಗೂ ನಿಮ್ಮೆಲ್ಲರ ವೆಬ್ tungataranga.com ಕ್ಲಿಕ್ ಮಾಡಿ ನಿರಂತರ ಸುದ್ದಿ ಓದಿ….
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಾಫ ಹುಸೇನ್ ಅವರು ಮಾತನಾಡಿ, ವಿಶ್ವದಾದ್ಯಂತ ತಡೆಗಟ್ಟಬಹುದಾದ ಕಾಯಿಲೆ ಮತ್ತು ಮರಣಗಳಿಗೆ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಶ್ವಾಸಕೋಶದ ಕಾಯಿಲೆಗಳಿಗೆ ತಂಬಾಕು ಸೇವನೆಯೇ ಪ್ರಮುಖ ಕಾರಣವಾಗಿದೆ ಎಂದರು.
ಬೀಡಿ, ಸಿಗರೇಟು ಮುಂತಾದ ಧೂಮಸಹಿತ ತಂಬಾಕು ಉತ್ಪನ್ನಗಳಲ್ಲಿ ೭೦೦೦ಕ್ಕೂ ಅಧಿಕ ರಾಸಾಯನಿಕಗಳಿದ್ದು, ಅದರಲ್ಲಿನ ೬೯ರಷ್ಟು ಕ್ಯಾನ್ಸರ್‌ಕಾರಕ ವಸ್ತುಗಳಾಗಿವೆ. ಧೂಮರಹಿತ ಜಗಿಯುವ ತಂಬಾಕು ಉತ್ಪನ್ನಗಳಲ್ಲಿನ ರಸಾಯನಿಕಗಳಲ್ಲಿ ಶೇ.೨೮ರಷ್ಟು ಕ್ಯಾನ್ಸರ್‌ಕಾರಕಗಳಾಗಿವೆ. ತಂಬಾಕು ಉತ್ಪನ್ನಗಳ ನಿರಂತರ ಸೇವನೆಯಿಂದ ವಿಶ್ವದಾದ್ಯಂತ ಪ್ರತಿವರ್ಷ ೬೦ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನ ಮರಣ ಹೊಂದುತ್ತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್‌ಸುರಗೀಹಳ್ಳಿ ಅವರು ಮಾತನಾಡಿ, ತಂಬಾಕಿನ ಬಳಕೆಯಿಂದ ಮಹಿಳೆಯರಲ್ಲಿ ಗರ್ಭಪಾತ, ಗರ್ಭಧಾರಣೆಯಲ್ಲಿ ವ್ಯತ್ಯಯ, ಬಂಜೆತನ, ಪುರುಷರಲ್ಲಿ ನಪುಂಸಕತೆ, ದಂತಕ್ಷಯ ಮುಂತಾದ ಸಮಸ್ಯೆಗಳು ಉಂಟಾಗಲಿವೆ ಎಂದ ಅವರು, ಪ್ರತಿ ೦೬ಸೆಕೆಂಡುಗಳಿಗೊಮ್ಮೆ ಒಬ್ಬ ವ್ಯಕ್ತಿ ತಂಬಾಕು ಸೇವನೆಯಿಂದ ಉಂಟಾಗುವ ಖಾಯಿಲೆಗಳಿಂದ ಮರಣ ಹೊಂದುತ್ತಿದ್ದಾರೆ ಎಂದರು.
ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ಆವರಣಗಳಲ್ಲಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಥಳೀಯ ಸಂಘಟನೆಗಳು, ಚುನಾಯಿತ ಪ್ರತಿನಿಧಿಗಳು, ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರು, ಆಶಾ-ಅಂಗನವಾಡಿ ಕಾರ್ಯಕರ್ತರ ಸಹಯೋಗದೊಂದಿಗೆ ತಂಬಾಕು ನಿಯಂತ್ರಣದ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಜಾಗೃತಿ ಜಾಥಾದ ಅಂಗವಾಗಿ ನಗರದ ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುಸ್ತಫಾ ಹುಸೇನ್ ಅವರು ಪ್ರತಿಜ್ಞಾವಿಧಿ ಬೋದಿಸಿದರು. ಜಿಲ್ಲಾ ನ್ಯಾಯಾಲಯದ ಆವರಣದಿಂದ ಆರಂಭಗೊಂಡ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂತಿಮವಾಗಿ ಐ.ಎಂ.ಎ. ಹಾಲ್‌ನಲ್ಲಿ ಸಂಪನ್ನಗೊಂಡಿತು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ, ವಕೀಲರ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ ಸೇರಿದಂತೆ ಸ್ಥಳೀಯ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯರು, ಪ್ರಶಿಕ್ಷಣಾರ್ಥಿಗಳು, ಆರೋಗ್ಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.