ವೃತ್ತಿ ಬದುಕನ್ನು ಗೌರವಯುತವಾಗಿ ಕಂಡಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿಂಬಾ ಕೆ.ಆರ್ ಹೇಳಿದರು.


ಇಲ್ಲಿನ ಗುರುಭವನದಲ್ಲಿ ಉಳ್ಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕ ಕೆ.ಆರ್.ರಾಮಪ್ಪ ಅವರಿಗೆ ಏರ್ಪಡಿಸಿದ್ದ ಬಿಳ್ಕೋಡಿಗೆ ಸಮಾರಂಭದಲ್ಲಿ ಇವರನ್ನು ಸನ್ಮಾನಿಸಿ ಮಾತನಾಡುತ್ತಿದ್ದರು.


ಯಾವುದೇ ಕಾರ್ಯದಲ್ಲಿ ತಮ್ಮನ್ನು ತಾವು ನಿರಂತರವಾಗಿ ತೊಡಗಿಸಿಕೊಳ್ಳಬೇಕು. ಆದರ್ಶಗಳನ್ನು ಹೇಳುವ ಬದಲು ಅವುಗಳನ್ನು ಅನುಷ್ಠಾನಗೊಳಿಸುವ ಕೆಲಸ ಆಗಬೇಕು. ಪ್ರಾಮಾಣಿಕ ಪ್ರಯತ್ನದಿಂದ ಮಾತ್ರ ತಮ್ಮ ಗುರಿ ಸಾಧಿಸಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ವೃತ್ತಿಯನ್ನು ಪ್ರೀತಿಸಬೇಕಾಗಿದೆ. ಜನರಿಗೆ ಬೇಕಾದ ರೀತಿಯಲ್ಲಿ ಕಾರ್ಯ ನಿರ್ವಹಿಸಿದಲ್ಲಿ ಯಾವುದೇ ಸಮಸ್ಯೆಗಳು ಇರುವುದಿಲ್ಲ. ಸತತ ಪರಿಶ್ರಮದಿಂದ ಅಭಿವೃದ್ದಿ ಸಾಧಿಸಬಹುದಾಗಿದೆ. ಶಿಕ್ಷಕರು ಮಕ್ಕಳೊಂದಿಗೆ ನಿರಂತರ ಕಲಿಸುವ ಕಾರ್ಯ ನಡೆಸಬೇಕು.ಎಂದರು


.

By admin

ನಿಮ್ಮದೊಂದು ಉತ್ತರ

You missed

error: Content is protected !!