ಶಿವಮೊಗ್ಗ,
ಶಿಕ್ಷಣ ಸಚಿವ ನಾಗೇಶ್ ಅವರನ್ನು ಸಂಪುಟದಿಂದ ವಜಾಗೊಳಿಸಿ ಹಾಗೂ ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಹಾಗೂ ೨೦ ಹೆಚ್ಚು ಕಾರ್ಯ ಕರ್ತರನ್ನು ಬಿಡುಗಡೆ ಗೊಳಿಸಲು ಆಗ್ರಹಿಸಿ ಇಂದು ಎನ್.ಎಸ್.ಯು.ಐ. ವತಿಯಿಂದ ಪ್ರತಿಭಟನೆ ನಡೆಸಲಾಯಿತು.


ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಪಠ್ಯಪುಸ್ತಗಳನ್ನು ಕೇಸರೀಕರಣ ಗೊಳಿಸುತ್ತಾ ವಿದ್ಯಾರ್ಥಿಗಳಲ್ಲಿ ಕೋಮು ದ್ವೇಷ ಭಾವನೆ ಬಿತ್ತುತ್ತಿದೆ. ಅದಕ್ಕಾಗಿ ರೋಹಿತ್ ಚಕ್ರತೀರ್ಥ ಅವರಂತಹ ಅನರ್ಹರನ್ನು ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ದೂರಿದರು.


ರಾಷ್ಟ್ರಕವಿ, ಯುಗದ ಕವಿ ಎಂದು ಹೆಸರಾಗಿರುವ ಕುವೆಂಪು ಅವರಂತಹ ಮಹಾನ್ ವ್ಯಕ್ತಿಗಳ ಕೊಡುಗೆಯಾದ ನಾಡ ಗೀತೆಗೆ ಅವಮಾನ ಮಾಡುವಂತಹ ರಾಷ್ಟ್ರ ದ್ರೋಹಿ, ಸಂಘ ಪರಿವಾರದ ಹಿನ್ನೆಲೆಯ ವ್ಯಕ್ತಿ ರೋಹಿತ್ ಚಕ್ರತೀರ್ಥನನ್ನು ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷನನ್ನಾಗಿ ನೇಮಕ ಮಾಡಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯವಾಗಿದೆ

. ಇಂತಹ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷನನ್ನಾಗಿ ನೇಮಕ ಮಾಡಿ ಅವನಿಂದ ಪಠ್ಯಪುಸ್ತಕ ರಚನೆ ಮಾಡಿ ವಿದ್ಯಾರ್ಥಿಗಳ ದಿಕ್ಕುತಪ್ಪಿಸು ತ್ತಿರುವ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು. ರೋಹಿತ್ ಚಕ್ರತೀರ್ಥ ನನ್ನು ಅಮಾನತುಗೊಳಿಸಿ ಕೇಸು ದಾಖಲಿಸ ಬೇಕು ಎಂದು ಒತ್ತಾಯಿಸಿದರು.
ಪಠ್ಯಪುಸ್ತಕ ಕೇಸರೀಕರಣಗೊಳಿಸುತಿ ರುವ ಕ್ರಮ ಖಂಡಿಸಿ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡಸುತ್ತಿದ್ದ ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೇರಿ ೨೦ ಜನ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಜೈಲಿಗಟ್ಟುವ ಮೂಲಕ ರಾಜ್ಯ ಸರ್ಕಾರ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.


ಕೂಡಲೇ ಎನ್.ಎಸ್.ಯು.ಐ. ಕಾರ್ಯಕರ್ತರ ಮೇಲೆ ದಾಖಲಿಸಿರುವ ಸುಳ್ಳು ಮೊಕದ್ದಮೆಯನ್ನು ವಜಾಗೊಳಿಸಿ, ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ದರು. ಈ ಬಗ್ಗೆ ಕ್ರಮಕೈಗೊಳ್ಳದಿದ್ದರೆ ರಾಜ್ಯ ದಾದ್ಯಂತ ಎನ್.ಎಸ್.ಯು.ಐ. ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.


ಈ ಸಂದರ್ಭದಲ್ಲಿ ಎನ್ ಎಸ್ ಯುಐ ಜಿಲ್ಲಾಧ್ಯಕ್ಷ ವಿಜಯ್ , ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಗೌಡ , ನಗರ ಅಧ್ಯಕ್ಷ ಚರಣ್ , ರವಿ ಕಾಟಿಕೆರೆ, ಚಂದ್ರೋಜಿ ರಾವ್, ರವಿ, ಪ್ರದೀಪ್, ತೋಫಿಕ್, ಸೂರಜ್, ಕಿರಣ್, ಪ್ರಮೋದ್, ಸಮರ್ಥ್, ಆಕಾಶ್, ಉಲ್ಲಾಸ್, ನಾಗೇಂದ್ರ ಆಟೋ , ಕಾಂಗ್ರೆಸ್ ಮುಖಂಡರಾದ ಜಿ.ಡಿ. ಮಂಜುನಾಥ್, ಅಲ್ಪಸಂಖ್ಯಾತ ಕಾಂಗ್ರೆಸ್ ನ ನಗರ ಅಧ್ಯಕ್ಷ ಮಹಮ್ಮದ್ ನಿಹಾಲ್, ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಮಧುಸೂದನ್, ಯುವ ಕಾಂಗ್ರೆಸ್ ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸತ್ತಾರ್, ಶಿವು, ಗಿರೀಶ್ ಮೊದಲಾದವರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!