ಶಿವಮೊಗ್ಗ,ಯಿತಿಗಳ ಚುನಾಯಿತ ಪ್ರತಿನಿಧಿಗಳು ಹಾಗೂ ಸಿಬ್ಬಂಧಿ ವರ್ಗದವರಿಗಾಗಿ ವಾರ್ಷಿಕವಾಗಿ ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.


ಅವರು ಇಂದು ಜಿಲ್ಲಾ ಪಂಚಾಯಿತಿ ವತಿಯಿಂದ ಗ್ರಾಮ ಪಂಚಾಯಿತಿ ಚುನಾ ಯಿತ ಪ್ರತಿನಿಧಿಗಳು ಹಾಗೂ ಸಿಬ್ಬಂಧಿಗಳಿ ಗಾಗಿ ಏರ್ಪಡಿಸಲಾಗಿದ್ದ ಕ್ರೀಡಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡು ತ್ತಿದ್ದರು. ಈ ರೀತಿಯ ರಾಜ್ಯಕ್ಕೆ ಮಾದರಿಯಾ ದಂತಹ ಕಾರ್ಯಕ್ರಮವನ್ನು ಆಯೋಜಿಸಲು ಕಾರಣಕರ್ತರಾದ ವಿಧಾನ ಪರಿಷತ್ ಸದಸ್ಯ ಡಿ.ಅರುಣ್ ಅವರ ಪ್ರಯತ್ನ ಸಾರ್ಥಕಭಾವ ಮೂಡಿಸಿದೆ ಎಂದರು.


ಸರ್ಕಾರವು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಿದೆ. ಪ್ರಸ್ತುತ ಗ್ರಾಮ ಪಂಚಾ ಯಿತಿಗಳ ಸದಸ್ಯರು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕೆರೆಗಳ ಅಭಿವೃದ್ಧಿಗೆ ವಿಶೇಷ ಗಮನಹರಿಸಬೇಕು. ಈ ನಿಟ್ಟಿನಲ್ಲಿ ಪಂಚಾ ಯಿತಿ ಅಧ್ಯಕ್ಷರು-ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘಟಿತ ಪ್ರಯ ತ್ನದಿಂದ ಯಶಸ್ಸು ಕಾಣಲು ಸಾಧ್ಯವಾಗಲಿದೆ. ಇದರಿಂದಾಗಿ ಗ್ರಾಮಗಳಲ್ಲಿ ಸಹಜವಾಗಿ ಹಸಿರುಕ್ರಾಂತಿ ಆಗಲಿದೆ ಎಂದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರು ಮಾತನಾಡಿ, ಗ್ರಾಮಗಳಲ್ಲಿ ನೀರು, ರಸ್ತೆ, ಚರಂಡಿ, ವಿದ್ಯುತ್ ಇಂತಹ ಅನೇಕ ಸಮಸ್ಯೆಗಳೊಂದಿಗೆ ದಿನಕಳೆಯುವ ಪ್ರತಿನಿಧಿಗಳು ತಮ್ಮ ದೈನಂ ದಿನ ಒತ್ತಡದಿಂದ ಮುಕ್ತವಾಗಿರಲು ಹಾಗೂ ಸದಾ ಲವಲವಿಕೆಯಿಂದಿರಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಲಿವೆ ಎಂದರು.


ಇದೇ ಸಂದರ್ಭದಲ್ಲಿ ವಿಧಾನ ಪರಿ ಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾತನಾಡಿ, ಚುನಾಯಿತ ಸದಸ್ಯರೆಲ್ಲರ ಲ್ಲಿಯೂ ಸ್ಪರ್ಧಾ ಮನೋಭಾವ, ಸಾಮರಸ್ಯ ಮೂಡಿಸುವಲ್ಲಿ ಈ ಕ್ರೀಡಾಕೂಟಗಳು ಸಹಕಾರಿಯಾಗಿವೆ. ಆದ್ದರಿಂದ ಮುಂದಿನ ಅಕ್ಟೋಬರ್ – ನವೆಂಬರ್ ಮಾಹೆಯಲ್ಲಿ ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸಿ ಅಯೋಜಿಸಲು ಉದ್ದೇಸಿಸಲಾಗಿದೆ ಎಂದರು

.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಎಂ.ಎಲ್.ವೈಶಾಲಿ, ಶ್ರೀಮತಿ ಉಮಾ ಸದಾಶಿವ, , ಅವಿನಾಶ್ ಮಂಜುನಾಥ ಮತ್ತಿತರರಿದ್ದರು.

ಪ್ರತಿಯೊಬ್ಬರಲ್ಲಿಯೂ ವಿಶೇಷ ಪ್ರತಿಭೆಗಳಿವೆ. ಅವುಗಳ ಅನಾವರಣಕ್ಕೆ ವೇದಿಕೆಗಳ ಅಗತ್ಯವಿದೆ. ಅಂತಹ ವೇದಿಕೆಯನ್ನು ಕಲ್ಪಿಸುವ ಪ್ರಯತ್ನ ಇದಾಗಿದೆ. ಈ ಎಲ್ಲಾ ಕ್ರೀಡಾಕೂಟಗಳಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಪ್ರಮುಖವಾಗಿದೆ. ಮುಂದಿನ ದಿನಗಳಲ್ಲಿ ಗೆಲ್ಲಲು ಇದು ಪ್ರಥಮ ಹೆಜ್ಜೆಯಾಗಲಿದೆ. ಇದೇ ಸಾಲಿನ ಅಕ್ಟೋಬರ್-ನವೆಂಬರ್ ಮಾಹೆಯಲ್ಲಿ ಚುನಾಯಿತ ಪ್ರತಿನಿಧಿಗಳಿಗಾಗಿಯೇ ಸಾಂಸ್ಕೃತಿಕ ಹಬ್ಬವನ್ನು ನಡೆಸಲು ಈಗಾಗಲೇ ಉದ್ಧೇಶಿಸಲಾಗಿದೆ. ವಿಜೇತರು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವಂತಾಗಬೇಕು.
– ಕೆ.ಎಸ್.ಈಶ್ವರಪ್ಪ, ಶಾಸಕರು

By admin

ನಿಮ್ಮದೊಂದು ಉತ್ತರ

error: Content is protected !!