ವಿಜಯಪುರ, ಜೂ.
ಮುಂದಿನ ಅಂದರೆ 2023 ರ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಡಿ ಯಲ್ಲಿ ಬಿಜೆಪಿ ಎದುರಿಸಲಿದ್ದು,140 ರಿಂದ 150 ಕ್ಷೇತ್ರಗಳಲ್ಲಿ ಶಾಸಕರನ್ನು ಆರಿಸಿತರಲು ಈಗಿನಿಂದಲೇ ಕಾರ್ಯಕರ್ತರು, ಮುಖಂಡರು ಶ್ರಮಿಸಬೇಕು ಎಂದು ನಿಕಟಪೂರ್ವ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

PDF Embedder requires a url attribute


ನಮ್ಮಲ್ಲಿ ದೊಡ್ಡ ಯುವಪಡೆಯಿದೆ. ಯುವಕರ ಆಶೀರ್ವಾದ ಬೆಂಬಲ ನನ್ನ ಮಗನ ಮೇಲೂ ಇದೆ. ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಯಾವುದೇ ಕ್ಷೇತ್ರದಲ್ಲಿಯೂ ಸ್ಪರ್ಧಿಸಿದರೆ ಗೆಲ್ಲುವ ವಿಶ್ವಾಸವಿದೆ. ಭವಿಷ್ಯದಲ್ಲಿ ನನ್ನ ಮಗ ರಾಜಕೀಯದಲ್ಲಿ ಬೆಳೆಯುತ್ತಾನೆ ಎಂಬ ವಿಶ್ವಾಸವಿದೆ ಎಂದರು.


ಇನ್ನು ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲಿ ವಾಯವ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಗಳಿಂದ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ವಿಧಾನ ಪರಿಷತ್ ನಲ್ಲಿ ನಮಗೆ ಸ್ಪಷ್ಟ ಬಹುಮತ ಸಿಗಲಿದೆ

. ಇನ್ನು ನಾಡಿದ್ದು ರಾಜ್ಯಸಭಾ ಚುನಾವಣೆಯಲ್ಲಿ ಕೂಡ ನಮ್ಮ ಅಭ್ಯರ್ಥಿಗಳಿಗೆ ಬಹುಮತ ಸಿಗಲಿದೆ. ಲೆಹರ್ ಸಿಂಗ್ ಅವರು ಮೊದಲ ಮತ್ತು ಎರಡನೇ ಪ್ರಾಶಸ್ತ್ಯ ಮತಗಳನ್ನು ಪಡೆಯುತ್ತಾರೆ.ವಿಜಯೇಂದ್ರಗೆ ಸಿಎಂ ಆಗುವ ಅರ್ಹತೆಯಿದೆ ಎಂದು ಹೇಳಿದ್ದು ಅವರ ವೈಯಕ್ತಿಕ ವಿಚಾರವಾಗಿದ್ದು ಅದರ ಬಗ್ಗೆ ಟೀಕೆ ಟಿಪ್ಪಣಿ ಮಾಡುವ ಅಗತ್ಯವಿಲ್ಲ ಎಂದರು.


ಬಿಜೆಪಿಯಿಂದ ನನಗೆ ಸಾಕಷ್ಟು ಸ್ಥಾನಮಾನ ಸಿಕ್ಕಿದೆ. ೪ ಬಾರಿ ನಾನು ಮುಖ್ಯಮಂತ್ರಿ ಆಗಿದ್ದೇನೆ. ಮುಖ್ಯಮಂತ್ರಿ ಸ್ಥಾನಕ್ಕೆ ನಾನೇ ರಾಜೀನಾಮೆ ಕೊಟ್ಟು ಹೊರಬಂದೆ ಎಂದರು.

By admin

ನಿಮ್ಮದೊಂದು ಉತ್ತರ

error: Content is protected !!