ಶಿವಮೊಗ್ಗ,
ಸಾರ್ವಜನಿಕರಿಗೆ, ಅಶಕ್ತರಿಗೆ ಸಹಾಯ ಮಾಡಲು ಸಾಕಷ್ಟು ಅವಕಾಶ ನೀಡುವ ಹಾಗೂ ಶಿಸ್ತಿಗೆ ಹೆಸರಾಗಿರುವ ಪೊಲೀಸ್ ಇಲಾಖೆಯಲ್ಲಿ ತಮಗೆ ಹುದ್ದೆ ದೊರೆತಿರು ವುದು ಅದೃಷ್ಟ. ಇಂತಹ ಸಾರ್ವಜನಿಕ ಸೇವೆಯ ಸದವಕಾಶವನ್ನು ಸದ್ಬಳಕೆ ಮಾಡಿ ಕೊಳ್ಳಿ ಎಂದು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ನ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಆರ್.ಹಿತೇಂದ್ರ ಕರೆ ನೀಡಿದರು.

೮ನೇ ಪಡೆ, ಕೆಎಸ್ಆರ್ಪಿ, ಮಾಚೇನ ಹಳ್ಳಿ, ಶಿವಮೊಗ್ಗ ಇಲ್ಲಿ ಇಂದು ಏರ್ಪಡಿ ಸಲಾಗಿದ್ದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ವತಿಯಿಂದ ಹೆಚ್ಚುವರಿ ಪೊಲೀಸ್ ತರಬೇತಿ ಶಾಲೆ, ೭ನೇ ಪಡೆ ಮಂಗಳೂರು ಮತ್ತು ಹೆಚ್ಚುವರಿ ಪೊಲೀಸ್ ತರಬೇತಿ ಶಾಲೆ ೮ನೇ ಪಡೆ ಶಿವಮೊಗ್ಗ ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇ ಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪೊಲೀಸ್ ಇಲಾಖೆ ಅತ್ಯಂತ ಶಿಸ್ತಿನ ಇಲಾಖೆಯಾಗಿದ್ದು ತಾವು ಶಿಸ್ತಿನ ಸಿಪಾಯಿಗಳೆಂಬುದನ್ನು ಮರೆಯದೆ ಸಾರ್ವಜನಿಕರಿಗೆ, ಅಶಕ್ತರಿಗೆ ಸಹಾಯ ಮಾಡಬೇಕು. ನಿಮ್ಮಿಂದ ಸಾರ್ವಜನಿಕರು ಹೆಚ್ಚಿನ ಸೇವೆಯನ್ನು ನಿರೀಕ್ಷಿಸುತ್ತಾರೆ. ಈ ನಿಟ್ಟಿನಲ್ಲಿ ತಾವು ಸನ್ನದ್ದರಾಗಿರಬೇಕು.

ಪ್ರಶಿಕ್ಷಣಾರ್ಥಿಗಳಾಗಿದ್ದ ವೇಳೆ ಅನೇಕ ರೀತಿಯ ಒಳಾಂಗಣ ಮತ್ತು ಹೊರಾಂಗಣ ತರಬೇತಿ ನೀಡಲಾಗಿದ್ದು, ಇದೇ ದೈಹಿಕ ಸದೃಢತೆಯನ್ನು ಉಳಿಸಿಕೊಂಡು ಹೋಗ ಬೇಕು. ಉತ್ತಮ ಆರೋಗ್ಯವಿದ್ದಲ್ಲಿ ಉತ್ತಮ ಮನಸ್ಸು ಇರುತ್ತದೆ. ಯಾವುದೇ ದುಶ್ಚಟಗಳಿಗೆ ಬೀಳದೆ ಶ್ರದ್ದೆಯಿಂದ ಕರ್ತವ್ಯ ನಿರ್ವಹಿ ಸಬೇಕು

. ಉನ್ನತ ವಿದ್ಯಾಭ್ಯಾಸ ಪಡೆದವರು ಹೆಚ್ಚಿನ ಸಂಖ್ಯೆಯಲ್ಲಿದ್ದು ತಮಗೆಲ್ಲ ಇನ್ನೂ ಒಳ್ಳೆಯ ಹುದ್ದೆ ಲಭಿಸಲಿ. ಇಲಾಖೆಯಲ್ಲಿನ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಿರಿ ಎಂದು ಸಲಹೆ ನೀಡಿದರು.

ಕೆಎಸ್ಆರ್ಪಿ ಮಹಾ ನಿರ್ದೇಶಕರು ಪಥ ಸಂಚಲನ ಪರಿವೀಕ್ಷಣೆ ಮಾಡಿದರು ಹಾಗೂ ಪ್ರಶಿಕ್ಷಣಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು. ಹಾಗೂ ಇದೇ ಸಂದರ್ಭದಲ್ಲಿ ವಾರ್ತಾ ಪತ್ರಿಕೆ ಬಿಡುಗಡೆ ಮಾಡಲಾಯಿತು.
ಕೆಎಸ್ಆರ್ಪಿ ಹೆಚ್ಚುವರಿ ತರಬೇತಿ ಶಾಲೆ, ೮ನೇ ಪಡೆಯ ಕಮಾಂಡೆಂಟ್ ಬಿ.ಡಿ.ಲೋಕೇಶ್ ವರದಿ ವಾಚನ ಮಾಡಿ ದರು. ಕೆಎಸ್ಆರ್ಪಿ ಹೆಚ್ಚುವರಿ ತರಬೇತಿ ಶಾಲೆ, ೭ನೇ ಪಡೆಯ ಕಮಾಂಡೆಂಟ್ ಬಿ.ಎಂ.ಪ್ರಸಾದ್ ನಿರ್ಗಮನ ಪ್ರಶಿಕ್ಷಣಾ ರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ನಿರ್ಗಮನ ಪ್ರಶಿಕ್ಷಣಾರ್ಥಿಗಳ ಶಿಸ್ತಿನ ಮತ್ತು ಕ್ರಮಬದ್ದ ಪಥ ಸಂಚಲನ, ವಾದ್ಯ ಮೇಳ, ಕನ್ನಡದಲ್ಲಿ ನೀಡಿದ ಕವಾಯತು ಆದೇಶ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಎಲ್ಲರ ಗಮನ ಸೆಳೆಯಿತು.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ನ ಉಪ ಪೊಲೀಸ್ ಮಹಾ ನಿರೀಕ್ಷಕರಾದ ಎಂ.ವಿ.ರಾಮಕೃಷ್ಣ ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀಪ್ರಸಾದ್ ಬಿ.ಎಂ, ಇತರೆ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.