ಶಿವಮೊಗ್ಗ, ಜೂ.೧೪
ತುರ್ತು ಚಿಕಿತ್ಸೆಗಳ ಸಂದರ್ಭದಲ್ಲಿ ಜೀವ ಉಳಿಸಲು ಅತಿ ಅಗತ್ಯವಾದ ರಕ್ತವನ್ನು ನಿಯಮಿತವಾಗಿ ಶಿಬಿರ ಆಯೋಜಿಸಿ ಸಂಗ್ರಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದರು.
ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಶಿವಮೊಗ್ಗ ಇವರ ವತಿಯಿಂದ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಇಂದು ನ್ಯೂಮಂಡ್ಲಿಯ ಫಾರುಕಿಯಾ ಶಾದಿ ಮಹಲ್ ಇಲ್ಲಿ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಕಾರ್ಯಕ್ರಮಾಧಿಕಾರಿ ಡಾ.ದಿನೇಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯರಾದ ಶಂಕರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಮೆಡಿಕಲ್ ಆಫೀಸರ್ ಡಾ.ಭೀಮಪ್ಪ ಪಾಲ್ಗೊಂಡಿದ್ದರು. ತುಂಗಾನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಅಕ್ತರ್ ನಿರೂಪಿಸಿದರು. ಪ್ರತಿಮಾ ಡಾಕಪ್ಪಗೌಡ ಸ್ವಾಗತಿಸಿದರು.