ಭದ್ರಾವತಿ, ಜೂ. 20:

ನಗರಸಭೆ ವತಿಯಿಂದ ಭಾನುವಾರ ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕ್ರೀಡಾ ಕೂಟದಲ್ಲಿ ಆಟವಾಡುತ್ತಿದ್ದಾಗ ಹೊರ ಗುತ್ತಿಗೆ ಪೌರಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಹಳೇನಗರದ ಭೂತನಗುಡಿ ನಿವಾಸಿ ದಿನೇಶ್‌ರಾವ್(38) ಮೃತಪಟ್ಟಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಹೊಂದಿದ್ದರು.

ಕಳೆದ ಸುಮಾರು 4 ವರ್ಷಗಳಿಂದ ನಗರದ ಬೈಪಾಸ್ ರಸ್ತೆ ಆನೇಕೊಪ್ಪದಲ್ಲಿರುವ ನಗರಸಭೆ ಜಲ ಸಂಗ್ರಹಗಾರದಲ್ಲಿ(ಪಂಪ್ ಹೌಸ್) ಹೊರ ಗುತ್ತಿಗೆ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸಿದ್ದರು.
ಕ್ರಿಕೆಟ್ ಆಟವಾಡುತ್ತಿದ್ದಾಗ ದಿನೇಶ್‌ರಾವ್ ಏಕಾಏಕಿ ಕುಸಿದು ಕೆಳಗೆ ಬಿದ್ದಿದ್ದು, ತಕ್ಷಣ ಸ್ಥಳದಲ್ಲಿಯೇ ಹಾಜರಿದ್ದ ಆರೋಗ್ಯ ಸಿಬ್ಬದಿ ತಪಾಸಣೆ ನಡೆಸಿದ್ದು ಮೃತಪಟ್ಟಿರುವುದನ್ನು ಖಚಿತ ಪಡಿಸಿದ್ದಾರೆ.


ದಿನೇಶ್‌ರಾವ್ ನಿಧನಕ್ಕೆ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೌರಾಯುಕ್ತರು, ಪೌರಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು ಸಂತಾಪ ಸೂಚಿಸಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!