ಶಿವಮೊಗ್ಗ
ಕೇಂದ್ರ ಪುರಸ್ಕೃತ ಯೋಜನೆಗಳಡಿ ಗೃಹ, ವಸತಿ ಯೋಜನೆಗಳು ಹಾಗೂ ಆದ್ಯತಾ ವಲಯಗಳ ಅರ್ಹ ಫಲಾನುಭವಿಗಳಿಗೆ ಅಗತ್ಯ ಸಾಲ-ಸೌಲಭ್ಯ ನೀಡಿ ಪ್ರೋತ್ಸಾಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾ ಹಕ ಅಧಿಕಾರಿ ಎಂ.ಎಲ್.ವೈಶಾಲಿ ಅವರು ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚಿಸಿದರು.
ಅವರು ಜಿಲ್ಲಾ ಮಾರ್ಗದರ್ಶಿ ಬ್ಯಾಂಕು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಿದ್ದ ನಾಲ್ಕನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೇಂದ್ರ ಪುರಸ್ಕೃತ ಯೋಜನೆಗಳಲ್ಲದೇ ಸಣ್ಣ ಮತ್ತು ಮದ್ಯಮ ಕೈಗಾರಿಕಾ ವಲಯಗಳಿಗೂ ಹಾಗೂ ಕೃಷಿ ಕ್ಷೇತ್ರಕ್ಕೂ ಆದ್ಯತೆ ನೀಡುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರಿಗೆ ಸೂಚಿಸಿದರು.
ಶೈಕ್ಷಣಿಕ ವಲಯಕ್ಕೆ ವಿಶೇಷ ಗಮನಹರಿ ಸುವಂತೆ ಸೂಚಿಸಿದ ಅವರು, ಕೆಲ ಬ್ಯಾಂಕುಗ ಳಲ್ಲಿ ವಿವಿಧ ಯೋಜನೆಗಳಲ್ಲಿ ನೀಡಿರುವ ಸಾಲ-ಸೌಲಭ್ಯಗಳ ಪ್ರಗತಿ ಆಶಾದಾಯಕ ವಾಗಿಲ್ಲ. ಈವರೆಗೆ ನಿರೀಕ್ಷಿತ ಪ್ರಗತಿ ಸಾಧಿಸದಿ ರುವ ಬ್ಯಾಂಕುಗಳ ವ್ಯವಸ್ಥಾಪಕರು ಮುಂದಿನ ಸಭೆಯಲ್ಲಿ ನಿರೀಕ್ಷಿತ ಗುರಿ ಸಾಧಿಸಿರುವ ಸಮಗ್ರ ವರದಿಯನ್ನು ಮಂಡಿಸುವಂತೆ ಸೂಚಿಸಿದರು.
ರಾಜ್ಯದ ಅನ್ಯ ಜಿಲ್ಲೆಗಳ ಪ್ರಗತಿಯನ್ನು ತುಲನಾತ್ಮಕವಾಗಿ ನೋಡಿದಾಗ, ಕೈಗಾರಿಕಾ ಮತ್ತು ಸಣ್ಣ ಕೈಗಾರಿಕಾ ವಲಯಗಳಲ್ಲಿನ ಪ್ರಗತಿ ಸಮಾಧಾನಕರವಾಗಿದ್ದರೂ ಇನ್ನಷ್ಟು ಪ್ರಗತಿ ಸಾಧಿಸುವ ಅಗತ್ಯವಿದೆ ಎಂದ ಅವರು, ಜಿಲ್ಲೆಯ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ವಹಿವಾಟನ್ನು ಡಿಜಟಲೀಕರಣಗೊಳಿಸುವಂತೆ ಈಗಾಗಲೇ ಸೂಚಿಸಲಾಗಿತ್ತು. ಅದರಂತೆ ಕೆಲವು ಬ್ಯಾಂಕುಗಳ ಡಿಜಿಟಲ್ ವ್ಯವಸ್ಥೆ ಕಲ್ಪಿಸಿಕೊಳ್ಳುತ್ತಿದ್ದರೆ ಇನ್ನೂ ಕೆಲವು ಬ್ಯಾಂಕುಗಳ ಇದೀಗ ಆರಂಭಿಸಲು ಯತ್ನಿಸುತ್ತಿವೆ. ಮುಂದಿನ ಸಭೆಯ ಹೊತ್ತಿಗೆ ಜಿಲ್ಲೆಯ ಎಲ್ಲಾ ಬ್ಯಾಂಕುಗಳ ಶೇ.೧೦೦ರಷ್ಟು ಡಿಜಿಟಲ್ ಆಡಳಿತ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರುವಂತೆ ಸೂಚಿಸಿದರು.
ಗ್ರಾಹಕರ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆ ಮಾಡುವ ಕಾರ್ಯ ಇನ್ನೂ ಬಾಕಿ ಇದ್ದು, ತ್ವರಿತವಾಗಿ ಪೂರ್ಣ ಗೊಳಿಸಿ, ನಿರೀಕ್ಷಿತ ಪ್ರಗತಿ ಸಾಧಿಸುವಂತೆ ಸೂಚಿಸಿದರು.
ಕೆನರಾ ಬ್ಯಾಂಕ್ ವಿಭಾಗೀಯ ವ್ಯವಸ್ಥಾ ಪಕ ಸಂದೀಪ್, ಆರ್.ಬಿ.ಐ. ಪ್ರತಿನಿಧಿ ಸುಪ್ರಿ ಯ ಬ್ಯಾನರ್ಜಿ, ಎಸ್.ಬಿ.ಐ. ಡಿವಿಜನಲ್ ಮ್ಯಾ ನೇಜರ್ ಬಿ.ರವಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್ ಸೇರಿದಂತೆ ಜಿಲ್ಲೆಯ ಎಲ್ಲಾ ಹಣಕಾಸು ಸಂಸ್ಥೆಗಳ ವ್ಯವಸ್ಥಾಪಕರು ಇದ್ದರು.