ಶಿವಮೊಗ್ಗ,
ಕಾಂಗ್ರೆಸ್ ಪಕ್ಷವನ್ನು ಬೆದರಿಸಲು ಇಡಿ (ಜಾರಿ ನಿರ್ದೇಶನಾಲಯ)ಯಂತಹ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಇಂದು ಗೋಪಾಲಗೌಡ ಬಡಾವಣೆಯಲ್ಲಿರುವ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ಬಂಧಿಸಿದರು.


ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ದುರು ದ್ದೇಶದಿಂದ ಇಡಿ ಮೂಲಕ ನೋಟೀಸ್ ನೀಡಿರುವುದಕ್ಕೆ ಕಾಂಗ್ರೆಸ್ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಆದಾಯ ತೆರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿದರು.


ಬಿಜೆಪಿ ಸರ್ಕಾರ ಅಧಿಕಾರಕ್ಕಾಗಿ ಎಂತಹ ದಾರಿಯನ್ನಾದರೂ ಹಿಡಿಯಲಿದೆ. ತನ್ನ ಕೋಮುವಾದಿ ನೀತಿಯಿಂದಾಗಿ ದಮನಕಾರಿ ನೀತಿ ಅನುಸರಿಸುತ್ತಾ ಬಂದಿದೆ. ಎಲ್ಲ ಕ್ಷೇತ್ರಗಳಲ್ಲೂ ಆಡಳಿತ ವೈಫಲ್ಯ ಕಂಡಿದೆ. ಜನಸಾಮಾನ್ಯರಿಗೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ತನ್ನ ಆಡಳಿತ ವೈಫಲ್ಯವನ್ನು ಮುಚ್ಚಿಕೊಳ್ಳಲು ಈ ರೀತಿ ಇಡಿಯಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.


ಪ್ರತಿಭಟನೆಯಲ್ಲಿ ಮುಖಂಡರುಗಳಾದ ಕಿಮ್ಮನೆ ರತ್ನಾಕರ್, ಆರ್.ಎಂ. ಮಂಜುನಾಥಗೌಡ, ಚಂದ್ರಭೂಪಾಲ್, ಯಮುನಾ ರಂಗೇಗೌಡ, ರೇಖಾ ರಂಗನಾಥ್, ಹೆಚ್.ಸಿ. ಯೋಗೀಶ್, ಕೆ. ರಂಗನಾಥ್, ಹೆಚ್.ಪಿ. ಗಿರೀಶ್, ಜಿ.ಡಿ. ಮಂಜುನಾಥ್, ಎನ್.ಡಿ. ಪ್ರವೀಣ್, ಕುಮ ರೇಶ್, ಸುವರ್ಣ ನಾಗರಾಜ್, ನಾಜೀಮಾ, ಪ್ರೇಮಾ ಸೇರಿದಂತೆ ಹಲವರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!