ಶಿವಮೊಗ್ಗ,
ಸಿಐಡಿ ತನಿಖೆ ಪೂರ್ಣಗೊಂಡ ನಂತರ ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾ ಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯ ವಿಚಾರದಲ್ಲಿ ಸಿಐಡಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ.


ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯ ವಿಚಾ ರದಲ್ಲಿ ಸಿಐಡಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಬೇರೆ ಬೇರೆಯವರು ಒತ್ತಡ ಹಾಕಬಹುದು. ಯಾವುದಕ್ಕೂ ಸೊಪ್ಪು ಹಾಕುವುದಿಲ್ಲ. ತನಿಖೆ ಮುಂ ದುವರೆಯಲಿದೆ.


ಹಣವಿದ್ದರೆ ಮಾತ್ರ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗುತ್ತೇವೆ ಎಂಬ ನಂಬಿಕೆಯನ್ನು ಪಾರ ದರ್ಶಕ ತನಿಖೆಯ ಮೂಲಕ ಹೋಗಲಾಡಿಸ ಲಿದ್ದೇವೆ ಎಂದು ಜ್ಞಾನೇಂದ್ರ ಭರವಸೆ ನೀಡಿದರು.


’ಸಿಐಡಿ ತನಿಖೆಯಲ್ಲಿ ಸಾಕ್ಷ್ಯಾಧಾರಗಳು ಸಿಗುವವರೆಗೂ ಯಾರನ್ನೂ ಮುಟ್ಟುವುದಿಲ್ಲ. ಸರಿಯಾದ ಸಾಕ್ಷ್ಯಾಧಾರಗಳು ದೊರೆತರೆ ಯಾರನ್ನೂ ಬಿಡೊಲ್ಲ. ದೊಡ್ಡ ದೊಡ್ಡ ಪೊಲೀಸ್ ಅಧಿಕಾರಿಗಳನ್ನು ಬಿಟ್ಟಿಲ್ಲ. ಈ ವಿಚಾರದಲ್ಲಿ ತನಿಖಾ ಸಂಸ್ಥೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ’ ಎಂದು ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಅಮೃತ್‌ಪೌಲ್ ಅವರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.

By admin

ನಿಮ್ಮದೊಂದು ಉತ್ತರ

error: Content is protected !!