ಶಿವಮೊಗ್ಗ,
ಸರ್ಕಾರದ ವಿವಿಧ ಯೋಜನೆಗಳು, ವಿವಿಧ ಕೃಷಿ ಮಾರುಕಟ್ಟೆ ಮಾಹಿತಿ, ಸಕಾಲ ಹಾಗೂ ಸೇವಾಸಿಂಧು ಯೋಜನೆಗಳ ಸೇವೆ, ಸಾರ್ವ ಜನಿಕ ಕುಂದುಕೊರತೆಗಳ ಸ್ವೀಕಾರ ಮತ್ತು ಮಾಹಿತಿಹಕ್ಕು ಕಾಯ್ದೆಯಡಿ ಮಾಹಿತಿ ಕೋರಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಗ್ರಾಮ-೧ ಕೇಂದ್ರಗಳನ್ನು ಖಾಸಗಿ ಸಹಭಾಗಿತ್ವ ದಲ್ಲಿ ಜಿಲ್ಲೆಯ ೨೪೧ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಲಾಗಿದ್ದು, ಉಳಿದ ೩೦ ಪಂಚಾಯಿ ತಿಗಳಲ್ಲಿ ಶೀಘ್ರದಲ್ಲಿ ಕೇಂದ್ರಗಳು ಆರಂಭ ಗೊಂಡು ಸಾರ್ವಜನಿಕ ಸೇವೆಗೆ ಸಜ್ಜಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಹೇಳಿದರು.


ಅವರು ಇಂದು ತಮ್ಮ ಕಚೇರಿ ಸಭಾಂಗಣ ದಲ್ಲಿ ಗ್ರಾಮ-೧ ಯೋಜನೆಯನ್ನು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ
ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕಳೆದ ೪-೬ತಿಂಗಳಲ್ಲಿ ಸುಮಾರು ೯೦೦೦ ಅರ್ಜಿಗಳು ಗ್ರಾಮ-೧ ಕೇಂದ್ರಗಳ ಮೂಲಕ ವಿಲೇವಾರಿಯಾಗಿದೆ ಎಂದರು.


ಈ ಯೋಜನೆಯ ಆರಂಭದ ಹಂತದಲ್ಲಿ ಯೋಜನೆಯ ವ್ಯವಸ್ಥಿತ ಅನುಷ್ಠಾನದಲ್ಲಿ ಅಲ್ಪ ಮಟ್ಟಿನ ನ್ಯೂನತೆಗಳಿದ್ದು ಕಾಲಾನಂತರದಲ್ಲಿ ಎಲ್ಲವೂ ಸರಿಯಾಗಲಿದೆ. ಸಾರ್ವಜನಿಕರು ಜಿಲ್ಲಾಡಾಳಿತದೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.


ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಹಾಗೂ ಸಕಾಲದಲ್ಲಿ ಮಾಹಿತಿ ಒದಗಿಸಿ ಜನಸ್ನೇಹಿ ವಾತಾವರಣ ನಿರ್ಮಿಸು ವಂತೆ ಅವರು ಸೂಚಿಸಿದರು.
ಜಿಲ್ಲಾ ಮಟ್ಟದ ಸಮಿತಿಯಲ್ಲಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ಆಯಾ ತಾಲೂಕು ಗಳಲ್ಲಿ ಗ್ರಾಮ-೧ ಸೇವೆಗಳ ಕುರಿತು ನಡೆಯುವ ಸಭೆಯಲ್ಲಿ ಭಾಗವಹಿಸುವಂತೆ ಹಾಗೂ ಕೇಂದ್ರಗಳಿಗೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಅವರು ಸೂಚಿಸಿದರು.


ಯಾವುದೇ ಅಡತಡೆಯಿಲ್ಲದೆ ಅರ್ಜಿಗಳು ವಿಲೇವಾರಿಯಾಗುವುದನ್ನು ಜಿಲ್ಲಾ ಸಮಿತಿ ಸದಸ್ಯರುಗಳು ನೋಡಿಕೊಳ್ಳಬೇಕು. ಕಾಲಮಿತಿಯಲ್ಲಿ ಅರ್ಜಿಗಳ ವಿತರಣೆ ಹಾಗೂ ಗುಣಾತ್ಮಕ ಸೇವೆಗಳ ಬಗ್ಗೆ ಭೇಟಿ ಸಂದರ್ಭದಲ್ಲಿ ಗಮನಿಸುವಂತೆ ಸೂಚಿಸಿದರು.


ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!