ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆ ತರಾತುರಿಯ ನಿರ್ಧಾರವಾಗಿದ್ದು, ದೇಶದ ಬಡ ಯುವಕರ ಉದ್ಯೋಗದ ಹಾಗೂ ಭವಿಷ್ಯದ ಹಕ್ಕನ್ನು ಕಸಿಯುವ ಅಪಾಯಕಾರಿ ಯೋಜನೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ, ಸಹಕಾರ ವಿಭಾಗದ
ರಾಜ್ಯ ಸಂಚಾಲಕ ಡಾ.ಆರ್.ಎಂ. ಮಂಜುನಾಥ್ ಗೌಡ ಹೇಳಿದರು.
ಅವರು ಇಂದು ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಅಗ್ನಿಪಥ್ ಯೋಜನೆ ವಿರೋಧಿಸಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು
.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಶಂಕರಘಟ್ಟ ರಮೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಒ. ಶಿವಕುಮಾರ್, ಮುಖಂಡರಾದ ಹಾರೋಗೊಳಿಗೆ ಪದ್ಮನಾಭ್, ಶಬಾನಾ, ವಿಠ್ಠಲ್, ರತ್ನಾಕರ ಶೆಟ್ಟಿ, ವೆಂಕಟೇಶ್, ಸುಂದರೇಶ್ ಮೊದಲಾದವರಿದ್ದರು.