ಶಿವಮೊಗ್ಗ,
ಪರಿಸರ ರಕ್ಷಣೆಗೆ ಕಠಿಣ ಕಾನೂನಿನ ಅವಶ್ಯಕತೆ ಇದೆ. ಪರಿಸರ ನಾಶ ಮಾಡುವವರಿಗೆ ದೊಡ್ಡ ಮಟ್ಟದ ದಂಡ ಹಾಕಿದಾಗ ಮಾತ್ರ ಪರಿಸರ ರಕ್ಷಣೆ ಸಾಧ್ಯ ಎಂದು ಹರಿಹರಪುರದ ಗೌರಿಗದ್ದೆ ಅವಧೂತ ವಿನಯ್ ಗುರೂಜಿ ಹೇಳಿದ್ದಾರೆ.
ಸಕ್ರೆಬೈಲ್ ಆನೆ ಬಿಡಾರದಿಂದ ೬ ಕಿ.ಮೀ. ವ್ಯಾಪ್ತಿಯಲ್ಲಿ ‘ಸ್ವಚ್ಛ ಭಾರತ್ ಶ್ರೇಷ್ಠ ಭಾರತ್’ ಘೋಷವಾಕ್ಯದೊಂದಿಗೆ ಗೌರಿಗದ್ದೆಯ ಮಹಾತ್ಮ ಗಾಂಧಿ ಟ್ರಸ್ಟ್, ಶಿವಮೊಗ್ಗದ ಸರ್ಜಿ ಫೌಂಡೇ ಷನ್, ಓಪನ್ ಮೈಂಡ್ ಶಾಲೆ ಜಾವಳ್ಳಿ, ಜೆಸಿಐ ಶಿವಮೊಗ್ಗ, ರೌಂಡ್ ಟೇಬಲ್ ಇಂಡಿಯಾ ೧೬೬, ಪರೋಪಕಾರಂ, ಆಶ್ರಮ ಬಡಾವಣೆ ಹಿತರಕ್ಷಣಾ ವೇದಿಕೆ ಇವರ ಸಹಯೋಗದೊಂದಿಗೆ ೩೦೦ ಕ್ಕೂ ಹೆಚ್ಚು ಕಾರ್ಯಕರ್ತರು ಈ ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡಿದ್ದರು.
ಈ ಕಾರ್ಯಕ್ರಮ ಉದ್ಘಾಟಿಸಿ ಆಂದೋ ಲನದ ನೇತೃತ್ವ ವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಗುರೂಜಿ, ಕಸ ಹಾಕಿದರೆ ಅರಣ್ಯ ಇಲಾಖೆ ದಂಡ ವಿಧಿಸಿದಾಗ ಮಾತ್ರ ನಮ್ಮ ಜನ ಎಚ್ಚೆತ್ತುಕೊಳ್ಳುತ್ತಾರೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಆರ್.ಟಿ.ಒ. ದೀಪಕ್, ಪರೋಪಕಾರಂ ತಂಡದ ಶ್ರೀಧರ್ ಇತರರಿದ್ದರು.