ಶಿವಮೊಗ್ಗ, ಜು.೦೨:
ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಾಳಿ ಅವರಿಗೆ ಸರ್ಕಾರಿ ನೌಕರರಾಗಿ ಜನಪರ ಉತ್ತಮ ಸೇವೆ ಸಲ್ಲಿಸಿದ್ದನ್ನು ಪರಿಗಣಿಸಿ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ನೀಡುವ ಸರ್ವೋತ್ತಮ ಪ್ರಶಸ್ತಿ ನೀಡಲು ಆಯ್ಕೆ ಮಾಡಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ೩೦ ಸರ್ಕಾರಿ ನೌಕರರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯಿಂದ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಾಳಿ ಅವರನ್ನು ರಾಜ್ಯಮಟ್ಟದ ಆಯ್ಕೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಈ ಪ್ರಶಸ್ತಿಯು ೫೦ ಸಾವಿರ ರೂ. ನಗದು ಮತ್ತು ಪ್ರಶಸ್ತಿ ಫಲಕ ಹೊಂದಿದ್ದು, ಮುಖ್ಯಮಂತ್ರಿಗಳು ಅಭಿನಂದನಾ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಲಿದ್ದಾರೆ.