ಬೆಂಗಳೂರು, ಜು.೦೩:
ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.


ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿ ಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮ ಕವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರ ಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು ರೂಪಿಸಲಾಗಿದೆ. ಸಮಿತಿ ಶಿಫಾರಸ್ಸು ಮಾಡಿದ ಕೂಡಲೇ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.


ಪೌರಕಾರ್ಮಿಕರ ಸಂರಕ್ಷಣೆಗೆ ಆರೋಗ್ಯ, ಶಿಕ್ಷಣ ಸೇರಿದಂತೆ ಎಲ್ಲ ದೃಷ್ಟಿಯಿಂದ ಖಾಯಂ ಆಗಿ ಸುರಕ್ಷತೆ ನೀಡಲು ಒಪ್ಪಲಾಗಿದೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ಮಾಡಲಾಗುವುದು. ಸೌಹಾರ್ದತೆಯಿಂದ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.


ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುತ್ತಿದ್ದು, ನಾಳೆ ಸಂಜೆ ಹಿಂತಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

By admin

ನಿಮ್ಮದೊಂದು ಉತ್ತರ

You missed

error: Content is protected !!