ಶಿವಮೊಗ್ಗ, ಜು.5:
ಕಾಣದಂತೆ ಮಾಯವಾಗಿದ್ದ ಮಳೆರಾಯ ಹುಯ್ಯೋ ಎಂದು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಈ ತಾಲ್ಲೂಕುಗಳಲ್ಲಿ ನಾಳೆ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಲು ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳು ಶಿವಮೊಗ್ಗ ರವರ ಆದೇಶದಂತೆ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಈ 03 ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಗಳಿಗೆ ದಿನಾಂಕ : 06.07.22 ನಾಳಿನ ಬುಧವಾರ ರಜೆ ಘೋಷಿಸಲಾಗಿದೆ ಎಂದು
ಉಪನಿರ್ದೇಶಕರು (ಆಡಳಿತ )
ಶಿವಮೊಗ್ಗ ಇವರು ತಿಳಿಸಿದ್ದಾರೆ.

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಶಿವಮೊಗ್ಗ,ಜು.05:

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 214.6 ಮಿಮಿ ಮಳೆಯಾಗಿದ್ದು, ಸರಾಸರಿ 30.66 ಮಿಮಿ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 764.90 ಮಿಮಿ ಇದ್ದು, ಇದುವರೆಗೆ ಸರಾಸರಿ 128.66 ಮಿಮಿ ಮಳೆ ದಾಖಲಾಗಿದೆ.
ಶಿವಮೊಗ್ಗ 9.80 ಮಿಮಿ., ಭದ್ರಾವತಿ 7.40 ಮಿಮಿ., ತೀರ್ಥಹಳ್ಳಿ 47.80 ಮಿಮಿ., ಸಾಗರ 57.10 ಮಿಮಿ., ಶಿಕಾರಿಪುರ 13.30 ಮಿಮಿ., ಸೊರಬ 38.50 ಮಿಮಿ. ಹಾಗೂ ಹೊಸನಗರ 40.70 ಮಿಮಿ. ಮಳೆಯಾಗಿದೆ.
ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್‍ಗಳಲ್ಲಿ: ಜಿಲ್ಲೆಯ ಲಿಂಗನಮಕ್ಕಿ: 1819 (ಗರಿಷ್ಠ), 1762.10 (ಇಂದಿನ ಮಟ್ಟ), 39262.10 (ಒಳಹರಿವು), 903.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1784.90. ಭದ್ರಾ: 186 (ಗರಿಷ್ಠ), 158.60 (ಇಂದಿನ ಮಟ್ಟ), 30167.00 (ಒಳಹರಿವು), 133.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 153.30. ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 43300.00 (ಒಳಹರಿವು), 43300.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24.

By admin

ನಿಮ್ಮದೊಂದು ಉತ್ತರ

error: Content is protected !!